ದೊಡ್ಡಬಳ್ಳಾಪುರ: ಮಗನ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದ ತಂದೆ ಆಯತಪ್ಪಿ ಹೊಟೇಲ್‌ನ ನಿರ್ಮಾಣ ಹಂತದಲ್ಲಿದ್ದ ಲಿಫ್ಟ್ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ಬಸವ ಭವನದ ಬಳಿಯಿರುವ ಸಮೃದ್ಧಿ ಗ್ರ್ಯಾಂಡ್ ಹೊಟೇಲ್‌ನ ಮೇಲ್ ಭಾಗದಲ್ಲಿರುವ ಸಭಾಂಗಣದಲ್ಲಿ ಘಟನೆ ನಡೆದಿದೆ.
ಮೃತನನ್ನು ಬೆಂಗಳೂರು ದಕ್ಷಿಣ ತಾಲೂಕಿನ ಎಲೇಕೊಡಿಗೇನಹಳ್ಳಿ ನಿವಾಸಿ ಮಂಜುನಾಥ್ (65) ಎಂದು ಗುರುತಿಸಲಾಗಿದೆ.
ಮೃತರ ಪುತ್ರ ದರ್ಶನ್ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆಯ ಶಿಲ್ಪಾ ಎಂಬುವರ ಜೊತೆ ಮದುವೆ ನಿಶ್ಚಯ ಮಾಡಲಾಗಿತ್ತು. ಈ ಹಿನ್ನಲೆ ಭಾನುವಾರ ಹೊಟೇಲ್‌ನ ಮೂರನೇ ಮಹಡಿಯಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಹುಡುಗನ ತಂದೆ ಮಂಜುನಾಥ್ ಮೂರನೇ ಮಹಡಿಯಿಂದ ಆಯತಪ್ಪಿ ಲಿಫ್ಟ್ ಗುಂಡಿಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲಿ ಸಾವನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.

