ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆ ಡಿ. 27 ರಂದು ನಡೆಯುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಬಾರ್, ಹೋಟೆಲ್, ಡಾಬಾ ಮಾಲೀಕರ ಸಭೆ ಸೋಮವಾರ ರಾತ್ರಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಸ್ಪಿ ಟಿ.ರಂಗಪ್ಪ, ಗ್ರಾಮಾಂತರ ಪ್ರದೇಶದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಗ್ರಾಮಗಳಲ್ಲಿನ ಕಿರಾಣಿ ಅಂಗಡಿಗಳಲ್ಲಿ ಮಧ್ಯ ಮಾರಾಟ ಮಾಡುವವರ ವಿರುದ್ದ ಮಾತ್ರವಲ್ಲದೆ ಕಿರಾಣಿ ಅಂಗಡಿಗಳಿಗೆ ಮಧ್ಯ ಸರಬರಾಜು ಮಾಡುವ ಬಾರ್ ಮಾಲೀಕರ ವಿರುದ್ಧವು ದೂರು ದಾಖಲಿಸಲಾಗುವುದು. ಡಾಬಾ, ಬಾರ್ಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮರ ಅಳವಡಿಸಬೇಕು. ನೆಪ ಮಾತ್ರಕ್ಕೆ ಸಿಸಿ ಟಿವಿ ಅಳವಡಿಸದೆ ಕ್ಯಾಮರಗಳು ನಿರಂತರವಾಗಿ ಕಾರ್ಯನಿರ್ವಹಿಸಬೇಕು.ಬಾರ್ ಮತ್ತು ಡಾಬಾಗಳಿಗೆ ದಿಢೀರ್ ಭೇಟಿ ನೀಡಿ ಕ್ಯಾಮರಗಳನ್ನು ಪರಿಶೀಲನೆ ಮಾಡಲಾಗುವುದು ಎಂದರು.
ಬಾರ್ ಮತ್ತು ಡಾಬಾಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅಪ್ರಾಪ್ತರಿಗೆ ಮಧ್ಯ ಮಾರಾಟ ಮಾಡುವುದು ಬಾಲಕಾರ್ಮಿಕ ಕಾಯ್ದೆ ಪ್ರಕಾರ ಅಪರಾಧವಾಗಿದೆ. ಬಾರ್ ಹಾಗೂ ಡಾಬಾಗಳಲ್ಲಿ ಯಾವುದೇ ರೀತಿಯ ಸಣ್ಣ ಪುಟ್ಟ ಗಲಬೆಗಳು ನಡೆದರು ಸಹ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.
ಸಭೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕಮಾರ್, ಸಬ್ಇನ್ಸ್ಪೆಕ್ಟರ್ ಗಜೇಂದ್ರ, ಮಂಜುನಾಥ್, ಬೇಬಿವಾಲೆಕಾರ್, ಸೋಮಶೇಖರ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

