ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಮೊದಲ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು(ದಿನಾಂಕ: 07.12.2020) ಹೊಸಕೋಟೆ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳ 494 ಸ್ಥಾನಗಳಿಗೆ ಅನುಸೂಚಿತ ಜಾತಿಯ ಸ್ಥಾನ-03, ಅನುಸೂಚಿತ ಪಂಗಡ-01, ಹಿಂದುಳಿದ ಬಿ ವರ್ಗ-0, ಹಿಂದುಳಿದ ಬಿ ವರ್ಗ-01, ಸಾಮಾನ್ಯ ವರ್ಗ-08 ಒಟ್ಟು-13 ನಾಮಪತ್ರ ಸಲ್ಲಿಕೆಯಾಗಿದ್ದು, 481 ಸ್ಥಾನಗಳು ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿವೆ.
ನೆಲಮಂಗಲ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳ 362 ಸ್ಥಾನಗಳಿಗೆ ಸಾಮಾನ್ಯ ವರ್ಗ-06 ನಾಮಪತ್ರ ಸಲ್ಲಿಕೆಯಾಗಿದ್ದು, ಅನುಸೂಚಿತ ಜಾತಿಯ ಸ್ಥಾನ, ಅನುಸೂಚಿತ ಪಂಗಡ, ಹಿಂದುಳಿದ ಎ ವರ್ಗ, ಹಿಂದುಳಿದ ಬಿ ವರ್ಗದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ, 356 ಸ್ಥಾನಗಳು ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿವೆ.
ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನ ಒಟ್ಟು 47 ಗ್ರಾಮ ಪಂಚಾಯತಿಯ 856 ಸ್ಥಾನಗಳ ಪೈಕಿ 19 ನಾಮ ಪತ್ರಗಳು ಸಲ್ಲಿಕೆಯಾಗಿದ್ದು, 837 ಸ್ಥಾನಗಳು ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

