ಭಾರತ್ ಬಂದ್‍ಗೆ ಬೆಂಬಲಿಸಿ ದೊಡ್ಡಬಳ್ಳಾಪುರದಲ್ಲಿ ರೈತಪರ ಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ : ಸಹಜ ಸ್ಥಿತಿಯಲ್ಲಿ ಜನ ಜೀವನ

ದೊಡ್ಡಬಳ್ಳಾಪುರ: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ,ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ, ಕೃಷಿ ಸಂಬಂಧಿತ ಕಾಯ್ದೆಗಳು, ವಿದ್ಯುತ್ ಕಾಯ್ದೆ-2020 ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳ ಜಾರಿ ವಿರೋಧಿಸಿ, ಅಖಿಲ ಭಾರತ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಬೆಂಬಲಿಸಿ, ನಗರದಲ್ಲಿ ರೈತ, ಕಾರ್ಮಿಕ, ಕನ್ನಡಪರ  ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಸಂಘಟನೆಗಳಿಂದ ಈ ಮೊದಲೇ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಮಂಗಳವಾರದಂದು ಬಂದ್ ಕೈಬಿಟ್ಟು ಪ್ರತಿಭಟನೆ  ಮಾತ್ರ ನಡೆಸಲಾಯಿತು. ಈ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ವ್ಯಾಪಾರ ವಹಿವಾಟು, ನೇಕಾರಿಕೆ ಕಚೇರಿಗಳು ಸೇರಿದಂತೆ ಜನಜೀವನ ಸಹಜ ಸ್ಥಿತಿಯಲ್ಲಿತ್ತು.

ನಗರದ ಸಿದ್ದಲಿಂಗಯ್ಯ ವೃತ್ತದಿಂದ ತಾಲೂಕು ಕಚೇರಿ ವೃತ್ತದವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ರೈತ ಕಾರ್ಮಿಕ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ, ಕಾಯ್ದೆ ಹಿಂಪಡೆಯುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಲಾಯಿತು.

ತಾಲೂಕು ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಕೃಷಿ ಕಾಯ್ದೆ ತಿದ್ದುಪಡಿ ಕಾಯ್ದೆಗಳು, ಹಣವಂತರು ಹಾಗೂ ಕಾರ್ಪೋರೇಟ್‍ಗಳಿಗೆ ಅನುಕೂಲವಾಗಿ ರೈತರಿಗೆ ಮಾರಕವಾಗಲಿದೆ. ರೈತರು ತಮ್ಮ ಮಾರಾಟ ವ್ಯವಸ್ಥೆಯನ್ನು ಸುಗಮವಾಗಿ ರೂಪಿಸಿಕೊಂಡಿರುವ ಎಪಿಎಂಸಿ ವ್ಯವಸ್ಥೆಯು ಹೊಸ ಎಪಿಎಂಸಿ ಕಾಯ್ದೆಯಿಂದ ರೈತರ ಕೈ ತಪ್ಪಿ ಬಂಡವಾಳ ಶಾಹಿತಗಳ ಹಿಡತಕ್ಕೆ ಹೋಗುತ್ತದೆ ಅಂತೆಯೇ ಭೂಸುಧಾರಣಾ ಕಾಯ್ದೆ 2013 ಸಹ ರೈತರಿಂದ  ಕಸಿದುಕೊಂಡು ಉಳ್ಳವರ ಪಾಲಾಗುತ್ತದೆ. ವಿದ್ಯುತ್ ಕ್ಷೇತ್ರ ಸಹ ಖಾಸಗೀರಣ ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರ ಇಡೀ ದೇಶವನ್ನೇ ಖಾಸಗೀಕರಣ ಮಾಡಲು ಹೊರಟು ಜನರನ್ನು ಗುಲಾಮಗಿರಿಗೆ ತಳ್ಳುತ್ತಿದೆ. ಕಾರ್ಮಿಕ ಕಾಯ್ದೆ ಸಹ ಕಾರ್ಮಿಕರ ವಿರೋಧವಾಗಿವೆ. ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿರುವುದ ರೈತರನ್ನು ಬೀದಿ ಪಾಲು ಮಾಡುವ ಯತ್ನವಾಗಿದೆ. ವಿದ್ಯುತ್ ಕ್ಷೇತ್ರ ಸಹ ಖಾಸಗೀರಣ ಮಾಡಲಾಗುತ್ತಿದ್ದು ರೈತರು ಹಾಗೂ ಜನಸಾಮಾನ್ಯರಿಗೆ ಹೊರೆಯಾಗಲಿದೆ. ಈ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡದೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ  ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕು ಅಧ್ಯಕ್ಷ ಹನುಮೇಗೌಡ, ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್,ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ, ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರೇವತಿ, ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್.ಪ್ರಭುದೇವ್, ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ಕೆಂಪರಾಜ್, ಕರವೆ ಪ್ರವೀಣ್ ಕುಮಾರ್ ಶೆಟ್ಟಿಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ಬಿಎಸ್‍ಪಿ ರಾಜ್ಯ ಮುಖಂಡ ಪುರುಷೋತ್ತಮ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್, ಸಿಪಿಐ(ಎಂ) ಕನ್ನಡ ಪಕ್ಷ, ಬಿಎಸ್‍ಪಿ ಪಕ್ಷಗಳ ಮುಖಂಡರು, ಸಿಐಟಿಯು ಸೇರಿದಂತೆ ವಿವಿಧ ರೈತ ಕಾರ್ಮಿಕ, ಕನ್ನಡಪರ  ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

ರಾಜಕೀಯ

ಮೋದಿ ಸರ್ಕಾರದ ಟೊಳ್ಳಾದ ವಿದೇಶಾಂಗ ನೀತಿಯಿಂದ ಗ್ಯಾಸ್ ಬೆಲೆ ಏರಿಕೆ: ಸಿಎಂ‌ ಸಿದ್ದರಾಮಯ್ಯ

ಮೋದಿ ಸರ್ಕಾರದ ಟೊಳ್ಳಾದ ವಿದೇಶಾಂಗ ನೀತಿಯಿಂದ ಗ್ಯಾಸ್ ಬೆಲೆ ಏರಿಕೆ: ಸಿಎಂ‌ ಸಿದ್ದರಾಮಯ್ಯ

ನಾವು ಎಲ್ಲಾ ಸಮಯದಲ್ಲೂ ಎಚ್ಚರಿಸಿದಂತೆ, ವಿಧಾನಸಭಾ ಚುನಾವಣೆಗಳು ಮುಗಿದ ಕ್ಷಣ, ನರೇಂದ್ರ ಮೋದಿ ಸರ್ಕಾರ ಮತ್ತೆ ಬೆಲೆಗಳನ್ನು ಹೆಚ್ಚಿಸಿದೆ. ಮೇ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹993 ರಷ್ಟು ಹೆಚ್ಚಿಸಲಾಗಿದೆ, ಚುನಾವಣಾ

[ccc_my_favorite_select_button post_id="121599"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]