ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಇಂದಿನ ಭಾರತ ಬಂದ್ ಬೆಂಬಲಿಸಿ ನಗರದ ಸಿದ್ದಲಿಂಗಯ್ಯ ವೃತ್ತದಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ.
ಪ್ರತಿಭಟನೆಯಲ್ಲಿ ರೈತ ಸಂಘ, ಕನ್ನಡಪರ ಸೇರಿದಂತೆ ವಿವಿಧ ಸಂಘಟನೆಗಳು ಭಾಗವಹಿಸಿದ್ದು, ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕೇಂದ್ರದ ವಿರುದ್ದ ದಿಕ್ಕಾರ ಕೂಗುತ್ತಿದ್ದಾರೆ.
ಪ್ರತಿಭಟನೆಯ ಮುಂದಿನ ಹಂತವಾಗಿ ತಾಲೂಕು ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೂಬಸ್ತ್ ಕೈಗೊಂಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

