ದೊಡ್ಡಬಳ್ಳಾಪುರ: ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಆರ್.ರವಿಕುಮಾರ್ ಸೂಚನೆ ನೀಡಿದ್ದಾರೆ.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲ್ಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಗ್ರಾಪಂ ಪಿಡಿಒಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಅನಿರ್ವಾರ್ಯತೆ ಇದ್ದಲ್ಲಿ ಜಿಲ್ಲಾಧಿಕಾರಿ ಅಥವಾ ಸಿಇಒ ಅನುಮತಿ ಪಡೆಯಬೇಕೆಂದು ತಿಳಿಸಿದರು. ಅಲ್ಲದೆ ಕಚೇರಿಗಳಲ್ಲಿ ಹಾಜರಾತಿಗೆ ಅಧಿಕಾರಿಗಳು ಹಾಗೂ ಸಿಂಬ್ಬದಿಗಳು ನಿಗದಿತ ಸಮಯದಲ್ಲಿ ಇ ಹಾಜರಾತಿಯನ್ನು ಕಡ್ಡಾಯವಾಗಿ ಪಾಲಿಸಬೇಕು, ಇಲ್ಲವಾದಲ್ಲಿ ಶಿಸ್ತು ಕ್ರಮಕೈಗೊಳ್ಳಲಾಗುವುದೆಂದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವುದು, ನಿಗದಿತ ತೆರಿಗೆ ಪರಿಷ್ಕರಣೆ ನಡೆಸಲು ಸೂಚನೆ ಸೇರಿದಂತೆ ವಿಚಾರಗಳ ಚರ್ಚೆ ನಡೆಸಿದರು.
ಸಭೆಯಲ್ಲಿ ತಾಪಂ ಇಒ ಮುರುಡಯ್ಯ, ಸಹಾಯಕ ನಿರ್ದೇಶಕ ಗಂಗರಾಜು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

