ಬಿಜೆಪಿಯದ್ದು ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ವಿರೋಧಿ ಸರ್ಕಾರ: ಡಿ.ಕೆ.ಶಿವಕುಮಾರ್

ಬೆಂಗಳೂರು: ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ರಾಜ್ಯ ಸರ್ಕಾರ ಫ್ಲೈಓವರ್ ಕಾಮಗಾರಿಗೆ ಬಳಸಿರುವುದು ಈ ವರ್ಗದ ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕಿರುವ ಬದ್ಧತೆಯನ್ನು ತೋರುತ್ತದೆ. ಇದು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ಸರ್ಕಾರವಾಗಿದ್ದು, ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಚಿವ ಶ್ರೀರಾಮುಲು ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇಡಿ ಭಾರತದ ಇತಿಹಾಸದಲ್ಲಿ ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರ ಸಂವಿಧಾನಾತ್ಮಕವಾಗಿ ಕಾನೂನು ಜಾರಿಗೆ ತಂದಿದ್ದೆವು. 30 ಸಾವಿರ ಕೋಟಿ ಹಣವನ್ನು ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟು ಆ ಹಣವನ್ನು ಅವರಿಗಾಗಿಯೇ ಖರ್ಚು ಮಾಡಲು ನಾವು ಕಾನೂನು ರೂಪಿಸಿದ್ದೆವು. 

ಕಳೆದ ಬಜೆಟ್ ನಲ್ಲಿ ಇದು 17 ಸಾವಿರ ಕೋಟಿಗೆ ಇಳಿದಿತ್ತು. ಆರ್ಥಿಕ ಸಂಪನ್ಮೂಲ ಕೊರತೆ ಪರಿಸ್ಥಿತಿ ಅರಿತು ನಾವು ಈ ಬಗ್ಗೆ ಮಾತನಾಡಿರಲಿಲ್ಲ. ಈಗ 10 ಸಾವಿರ ಕೋಟಿಗೆ ಬಂದಿದ್ದು, ಜತೆಗೆ ಆ ಹಣವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಿದೆ. ಇದು ಬಿಜೆಪಿಯು ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರ ವಿಚಾರವಗಿ ಬದ್ಧತೆ ಹೊಂದಿಲ್ಲ ಎಂಬುದಕ್ಕೆ ಸಾಕ್ಷಿ. 

ಕಾರಜೋಳ ಅವರು ಹಾಗೂ ಶ್ರೀರಾಮುಲು ಅವರಿಗೆ ಸ್ವಾಭಿಮಾನ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಕಾರಜೋಳ ಅವರು ಉಪಮುಖ್ಯಮಂತ್ರಿಯಾಗಿ ಅವರ ಧ್ವನಿ ಕಳೆದುಕೊಂಡಿದ್ದಾರೆ. ಬಿಜೆಪಿಯ ದಲಿತ ವಿರೋಧಿ ನೀತಿಯನ್ನು ಇವರಿಂದ ತಡೆಯಲು ಸಾಧ್ಯವಾಗಿಲ್ಲ. ಈ ಇಬ್ಬರ ಸಮ್ಮತಿ ಇಲ್ಲದೆ ಈ ಇಲಾಖೆ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಇದು ದಲಿತ ವಿರೋಧಿ ಸರ್ಕಾರವಾಗಿದ್ದು, ಇದು ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ.

ಕಲ್ಯಾಣ ಕರ್ನಾಟಕದ ನಿರ್ಲಕ್ಷ್ಯ: ಈ ಭಾಗದಲ್ಲಿ ಕಾಂಗ್ರೆಸ್ ಶಾಸಕರು ಹೆಚ್ಚಾಗಿದ್ದಾರೆ. ಹೀಗಾಗಿ ಕಲ್ಯಾಣ ಕರ್ನಾಟಕಕ್ಕೆ ನಿಗದಿ ಮಾಡಿರುವ 1500 ಕೋಟಿ ಹಣ ಬಿಡುಗಡೆ ಮಾಡಿದರೆ ನಮ್ಮ ಶಾಸಕರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಬಿಜೆಪಿ ಸರ್ಕಾರ ಈ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ.

ಜೆಡಿಎಸ್ ನಾಯಕರನ್ನು ಪ್ರಧಾನಿ, ಮುಖ್ಯಮಂತ್ರಿ ಮಾಡಿದ್ದೇ ನಮ್ಮ ಶಾಲು: ಕಾಂಗ್ರೆಸ್ ಪಕ್ಷದ ಶಾಲಿನ ಬಗ್ಗೆ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಉತ್ತರಿಸಿ, ಪಾಪ ಏನು ಮಾಡ್ತೀರಿ. ಜೆಡಿಎಸ್ ನಾಯಕರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿದ್ದು, ಇದೇ ಶಾಲು. ಕುಮಾರಸ್ವಾಮಿ ಅವರನ್ನು ಈ ರಾಜ್ಯದ ಮುಖ್ಯಮಂತ್ರಿಯಾಗಿ ಮಾಡಿದ್ದು ಕೂಡ ಇದೇ ಶಾಲು. ಈಗ ಅವರು ಅದೇ ಶಾಲಿನ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಎಂದರೆ, ಇದರ ಬಗ್ಗೆ ರಾಜ್ಯದ ಜನತೆ ತೀರ್ಮಾನ ಮಾಡಲಿ ಎಂದರು.

ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ‌ಪಕ್ಷದ‌ ನಾಯಕ ‌ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವ ಜಮೀರ್ ಅಹ್ಮದ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]