ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿ ಚುನಾವಣೆ ಡಿ.27 ರಂದು ನಡೆಯುವ ಹಿನ್ನೆಲೆಯಲ್ಲಿ ಬುಧವಾರ ಡಿವೈಎಸ್ಪಿ ಟಿ.ರಂಗಪ್ಪ ಅವರು ರೌಡಿಶೀಟರ್ಗಳ ಪೆರೇಡ್ ನಡೆಸುವ ಮೂಲಕ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದರೆ ಕಠಿಣ ಕ್ರಮ ಕೈಗೊಳ್ಳುವ ಖಡಕ್ ಎಚ್ಚರಿಕೆ ನೀಡಿದರು.
ನಗರ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ರೌಡಿಶೀಟರ್ಗಳ ಪೇರೆಡ್ ಸಂದರ್ಭದಲ್ಲಿ ಮಾತನಾಡಿದ ಟಿ.ರಂಗಪ್ಪ, 26 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಯಾವುದೇ ಗಲಬೆ ಅಥವಾ ಅಕ್ರಮಗಳಲ್ಲಿ ಭಾಗಿಯಾದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.
ಅಲ್ಲದೆ ಗ್ರಾಮಪಂಚಾಯಿತಿ ಚುನಾವಣೆಗು ಮುನ್ನ ಎಲ್ಲಾ ರೌಡಿಶೀಟರ್ಗಳ ಮೇಲೆ ನಿಗಾವಹಿಸಲಾಗುವುದು. ಮುಂಜಾಗ್ರತ ಕ್ರಮವಾಗಿ ಮುಚ್ಚಳಿಕೆ ಪತ್ರವನ್ನು ಬರೆಸಿಕೊಳ್ಳಲಾಗುವುದು. ತಾಲ್ಲೂಕಿನಲ್ಲಿ ಶಾಂತಿಯುತ ಮತದಾನಕ್ಕಾಗಿ ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಪೊಲೀಸ್ ಇಲಾಖೆವತಿಯಿಂದ ಕೈಗೊಳ್ಳಲಾಗುತ್ತಿದೆ. ಜನರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡೆದೆ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಸಬ್ಇನ್ಸ್ಪೆಕ್ಟರ್ ಸೋಮಶೇಖರ್, ಮಂಜುನಾಥ್, ಬೇಬಿವಾಲೆಕಾರ್, ಗಜೇಂದ್ರ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

