ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಸದನದಲ್ಲಿ ಮಹತ್ವದ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ ಮಾಡಿದ ಅಂಗವಾಗಿ ದೊಡ್ಡಬಳ್ಳಾಪುರದಲ್ಲಿ ಗೋ ಪೂಜೆ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.
ಬೆಂಗಳೂರು ಗ್ರಾಮಂತರ ಜಿಲ್ಲಾ ಕಾರ್ಯಾಲಯದಲ್ಲಿ ಬಿಜೆಪಿ ಮುಖಂಡರು, ಗೋಮಾತೆಯ ಪೂಜೆಯನ್ನು ಮಾಡುವ ಮುಖೇನ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ ಮಾಡಿದ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿ ಸಂಭ್ರಮಾಚರಣೆ ನಡೆಸಿದರು.
ಈ ವೇಳೆ ರಾಜ್ಯ ಪರಿಷತ್ ಸದಸ್ಯ ಮುದ್ದಪ್ಪ, ಜಿಲ್ಲಾ ವಕ್ತಾರರಾದ ಪುಷ್ಪಾಶಿವಶಂಕರ್, ಉಪಾಧ್ಯಕ್ಷೆ ಉಮಾಮಹೇಶ್ವರಿ, ನಗರ ಘಟಕದ ಅಧ್ಯಕ್ಷ ಹೆಚ್.ಎಸ್.ಶಿವಶಂಕರ್, ರಾಜ್ಯಾ ಸಾಮಾಜಿಕ ಜಾಲತಾಣದ ಪ್ರಮುಖ್ ಶಿವಾನಂದರೆಡ್ಡಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗಿರಿಜಾ, ನಗರ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ, ಮುನಿರಾಜು, ಲಕ್ಷ್ಮೀನಾರಾಯಣ್, ನಗರ ಯುವಮೂರ್ಚಾ ಅಧ್ಯಕ್ಷ ಶಿವು, ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಮುಖಂಡರಾದ ಲಿಲಾಮಹೇಶ್, ಸುಶೀಲಮ್ಮರಾಘವ, ನಯನ, ರಘುನಂದನ್, ಮಂಜುನಾಥ್, ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

