ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಮೊದಲ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಇಂದು(ದಿನಾಂಕ: 09.12.2020) ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನ ಒಟ್ಟು 47 ಗ್ರಾಮ ಪಂಚಾಯತಿಯ 856 ಸ್ಥಾನಗಳ ಪೈಕಿ 387 ನಾಮ ಪತ್ರಗಳು ಸಲ್ಲಿಕೆಯಾಗಿದ್ದು, 587 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿವೆ.
ಹೊಸಕೋಟೆ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳ 494 ಸ್ಥಾನಗಳಿಗೆ ಅನುಸೂಚಿತ ಜಾತಿ-35, ಅನುಸೂಚಿತ ಪಂಗಡ-08, ಹಿಂದುಳಿದ ಎ ವರ್ಗ-15, ಹಿಂದುಳಿದ ಬಿ ವರ್ಗ-05, ಸಾಮಾನ್ಯ ವರ್ಗ-84, ಒಟ್ಟು-147 ನಾಮಪತ್ರ ಸಲ್ಲಿಕೆಯಾಗಿದ್ದು, 378 ಸ್ಥಾನಗಳು ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿವೆ.
ನೆಲಮಂಗಲ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳ 362 ಸ್ಥಾನಗಳಿಗೆ ಅನುಸೂಚಿತ ಜಾತಿ-69, ಅನುಸೂಚಿತ ಪಂಗಡ-13, ಹಿಂದುಳಿದ ಎ ವರ್ಗ-25, ಹಿಂದುಳಿದ ಬಿ ವರ್ಗ-06, ಸಾಮಾನ್ಯ ವರ್ಗ-127, ಒಟ್ಟು-240 ನಾಮಪತ್ರ ಸಲ್ಲಿಕೆಯಾಗಿದ್ದು, 209 ಸ್ಥಾನಗಳು ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

