ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದ ಮುಷ್ಕರವನ್ನು ಬೆಂಬಲಿಸಿ, ತಾಲೂಕಿನ ವಿವಿಧ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸಿದರು.
ಕೇಂದ್ರ ಸರ್ಕಾರ ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿದೆ.ಆದರೆ, ಅಡ್ಡದಾರಿಯಲ್ಲಿ ತರಬೇತಿ ಪಡೆದ ಪದವೀಧರಿಗೆ ನಡೆಯುವ ಶಸಚಿಕಿತ್ಸೆ ಸಾರ್ವಜನಿಕರನ್ನು ಆರೋಗ್ಯವನ್ನು ಅಪಾಯಕ್ಕೆ ತಳ್ಳಲಿದೆ. ವೈದ್ಯಕೀಯ ಅಧ್ಯಯನ ವಿಭಾಗಗಳನ್ನು ಮಿಶ್ರಣಗೊಳಿಸುವ ಈ ನಿರ್ಧಾರ ಸರಿಯಲ್ಲ. ಸರ್ಕಾರ ಆಯುರ್ವೇದ ಚಿಕಿತ್ಸಾ ಕ್ರಮಗಳನ್ನು ಅಲೋಪತಿ ಜತೆ ಸೇರಿಸಿ ಹಾಳುಗೆಡವಬಾರದು ಕೂಡಲೇ ಈ ಸೂಚನೆ ಹಿಂಪಡೆಯಬೇಕು ಎಂದು ಭಾರತೀಯ ವೈದ್ಯಕೀಯ ಸಂಘ ಒತ್ತಾಯಿಸಿರುವ ಹಿನ್ನಲೆಯಲ್ಲಿ ಇಂದು ಕಪ್ಪುಪಟ್ಟಿ ಧರಿಸಿ ಮುಷ್ಕರಕ್ಕೆ ಬೆಂಬಲ ನೀಡಲಾಗುತ್ತಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಸಮಿತಿ ಸದಸ್ಯ ಡಾ.ಎಚ್.ಜಿ.ವಿಜಯಕುಮಾರ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

