ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ತೈವಾನ್‌ ಕಂಪನಿಗಳ ಒಲವು / ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಭೇಟಿ ಮಾಡಿದ ತೈವಾನ್‌ ನಿಯೋಗ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ತೈವಾನ್‌ ಕಂಪನಿಗಳು ಒಲವು ತೋರಿಸಿವೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ತೈಪೈ ಆರ್ಥಿಕ ಹಾಗೂ ಸಾಂಸ್ಕೃತಿಕ ಕೇಂದ್ರದ ಡೈರೆಕ್ಟರ್‌ ಜನರಲ್‌ ಬೆನ್‌ ವಾಂಗ್‌ ನೇತೃತ್ವದ ನಿಯೋಗ ಇಂದು ಭೇಟಿ ಮತ್ತು ಸುಧೀರ್ಘ ಚರ್ಚೆಯನ್ನು ನಡೆಸಿತು.

ಈ ನಿಯೋಗವನ್ನು ಭೇಟಿ ಮಾಡಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ತೈವಾನ್‌ ಹಾಗೂ ಭಾರತ ದೇಶದ ನಡುವೆ ಆರ್ಥಿಕ ಹಾಗೂ ಸಾಂಸ್ಕೃತಿ ವಿನಿಮಯದ ಇತಿಹಾಸವಿದೆ. ಕರ್ನಾಟಕ ರಾಜ್ಯದತ್ತ ತೈವಾನ್‌ ಕಂಪನಿಗಳ ಒಲವು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುವುದರ ಮೂಲಕ ತೈವಾನ್‌ ಕಂಪನಿಗಳ ಪ್ರಮುಖ ಆದ್ಯತೆಯ ರಾಜ್ಯವಾಗಿರುವುದು ಬಹಳ ಸಂತಸದ ವಿಷಯವಾಗಿದೆ. ತೈವಾನ್ ಕಂಪನಿಗಳೊ೦ದಿಗೆ ಮಾತುಕತೆಗಳನ್ನು ಸುಗಮಗೊಳಿಸಿ, ನಮ್ಮ ರಾಜ್ಯ ಸರಕಾರ ಅಂತಹ ಮಾತುಕತೆಗಳು ಹಾಗೂ ಬಂಡವಾಳ ಹೂಡಿಕೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರಗಳನ್ನು ನೀಡಲು ಸಿದ್ದವಿದೆ ಎಂದು ಭರವಸೆಯನ್ನು ನೀಡಿದರು. 

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಅವರು ಮಾತನಾಡಿ, ತೈವಾನ್‌ ಹಾಗೂ ಭಾರತ ದೇಶಗಳು ಇತ್ತೀಚಿನ ದಿನಗಳಲ್ಲಿ ಪ್ರಮುಖ ಪಾಲುದಾರರಾಗಿ ಹೊರಹೊಮ್ಮಿವೆ. ರಾಜ್ಯದಲ್ಲಿ ಈಗಾಗಲೇ ವಿಸ್ಟ್ರನ್‌, ಎಫ್‌ಎಫ್‌ಜಿ ಮತ್ತು ಸಿಡಿಸಿ ಯಂತಹ ತೈವಾನ್‌ ಕಂಪನಿಗಳು ರಾಜ್ಯದಲ್ಲಿ ಕಾರ್ಯಾರಂಭ ಮಾಡಿವೆ. ರಾಜ್ಯದ ಆರ್ಥಿಕತೆಯ ಬೆಳವಣಿಗೆಗೆ ತಮ್ಮ ಕೊಡುಗೆಯನ್ನು ನೀಡುತ್ತಿವೆ. ಇದು ತೈವಾನ್‌ ಹಾಗೂ ಕರ್ನಾಟಕ ರಾಜ್ಯದ ನಡುವಿನ ಬಾಂದವ್ಯವನ್ನು ಉತ್ತಮಗೊಳಿಸಿವೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಅತ್ಯತ್ತಮ ವಾತಾವರಣವಿದೆ. ಕೈಗಾರಿಕಾ ಸ್ನೇಹಿ ಕಾಯ್ದೆಗಳು ಹಾಗೂ ನೀತಿಗಳ ಅನುಷ್ಠಾನ ಆಗುತ್ತಿದ್ದು ಸುಲಭವಾಗಿ ಕೈಗಾರಿಕೆಗಳನ್ನು ಸ್ಥಾಪಿಸಬಹುದಾಗಿದೆ. ಈ ಹಿನ್ನಲೆಯಲ್ಲಿ ತೈವಾನ್‌ ಕಂಪನಿಗಳು ಬಂಡವಾಳ ಹೂಡಿಕೆಗೆ ಮಧ್ಯಸ್ತಿಕೆ ವಹಿಸುವಂತೆ ನಿಯೋಗಕ್ಕೆ ತಿಳಿಸಿದರು. ಕರ್ನಾಟಕ ರಾಜ್ಯ ಬಂಡವಾಳ ಹೂಡಿಕೆಗೆ ಎಲ್ಲಾ ರೀತಿಯ ಸಹಕಾರಗಳನ್ನು ನೀಡಲಿದೆ ಎಂದು ಭರವಸೆ ನೀಡಿದರು. 

ತೈಪೈ ಆರ್ಥಿಕ ಹಾಗೂ ಸಾಂಸ್ಕೃತಿಕ ಕೇಂದ್ರದ ಡೈರೆಕ್ಟರ್‌ ಜನರಲ್‌ ಬೆನ್‌ ವಾಂಗ್‌ ಮಾತನಾಡಿ, ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ತಿಳಿದುಕೊಳ್ಳಲು ತೈವಾನ್‌ ಕಂಪನಿಗಳು ಆಸಕ್ತಿಯನ್ನು ವ್ಯಕ್ತಪಡಿಸಿವೆ ಎಂದು ಹೇಳಿದರು. 

ನಂತರ ಈ ನಿಯೋಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ, ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್‌ ಕೃಷ್ಣ ಅವರ ನೇತೃತ್ವದ ಅಧಿಕಾರಿಗಳು ಹಾಗೂ ರಾಜ್ಯದಲ್ಲಿ ಹೂಡಿಕೆ ಮಾಡಿರುವ ಪ್ರಮುಖ ಕಂಪನಿಗಳ ಪ್ರತಿನಿಧಿಗಳೊಂದಿಗೆ ಸಭೆಯನ್ನು ನಡೆಸಿದರು. ಈ ಸಂಧರ್ಭದಲ್ಲಿ ರಾಜ್ಯದಲ್ಲಿ ಹೂಡಿಕೆಗೆ ಇರುವ ಪ್ರಮುಖ ಅವಕಾಶಗಳನ್ನು ತಿಳಿಸಿಕೊಡಲಾಯಿತು. ಇನ್‌ವೆಸ್ಟ್‌ ಕರ್ನಾಟಕ ಪೋರಂನ ಸಿಓಓ ಬಿ.ಕೆ ಶಿವಕುಮಾರ್‌, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ, ಐಕೆಎಫ್‌ ಡೆಪ್ಯಟಿ ಡೈರೆಕ್ಟರ್‌ ಭೈರೇಗೌಡ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]