ದೊಡ್ಡಬಳ್ಳಾಪುರ: ಕಳೆದ ಹಲವು ದಿನಗಳಿಂದ ತೀವ್ರಗತಿಯಲ್ಲಿ ಇಳಿಯುತ್ತಿದ್ದ ಕರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ ಶೂನ್ಯಕ್ಕೆ ತಲುಪುವ ವೇಳೆಯಲ್ಲಿ ಏಕಾಏಕಿ ಏರಿಕೆಯಾಗಿದ್ದು, ಇಂದು ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮೊದಲ ಸ್ಥಾನ ಪಡೆದು ಆತಂಕ ಸೃಷ್ಟಿಸಿದೆ.
ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ಇಂದು ಒಂದೇ ದಿನ ತಾಲೂಕಿನ 23 ಜನರಿಗೆ ಸೋಂಕು ಧೃಡ ಪಟ್ಟಿದೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಶುಕ್ರವಾರದ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ 16 ಪುರುಷರು ಮತ್ತು 7 ಮಹಿಳೆಯರು ಸೇರಿ 23 ಜನರಿಗೆ ಸೋಂಕು ದೃಢಪಟ್ಟಿದೆ.
ಪ್ರಸ್ತುತ ತಾಲೂಕಿನಲ್ಲಿ 4638 ಮಂದಿಗೆ ಕರೊನಾ ಸೋಂಕು ತಗುಲಿದ್ದು 4592 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಕರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ 46 ಆಗಿದೆ.
ಉಳಿದಂತೆ ಸೋಂಕಿಗೆ ಒಳಗಾದ 9 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 37ಮಂದಿಯನ್ನು ದೇವನಹಳ್ಳಿ / ಹಜ್ ಭವನ/ ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

