ದೊಡ್ಡಬಳ್ಳಾಪುರ: ಖಾಸಗಿ ಶಾಲಾ ಶಿಕ್ಷಕರ ಮತ್ತು ಆಡಳಿತ ಮಂಡಳಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ಡಿ.16ರಂದು ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿದೆ.
ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರು ಮತ್ತು ಇತರೆ ಸಿಬ್ಬಂದಿ ನೆರವಿಗೆ ಸರ್ಕಾರ ಧಾವಿಸಬೇಕು ಹಾಗೂ ಶಾಲೆಗಳ ಮರು ಆರಂಭ, ದಾಖಲಾತಿ, ಹಾಜರಾತಿ ಕನಿಷ್ಠ ಮೌಲ್ಯ ಮಾಪನದ ತೇರ್ಗಡೆ, ಬಾಕಿ ಹಾಗೂ ಕನಿಷ್ಠ ಶುಲ್ಕ ಪಾವತಿಸುವ ಬಗ್ಗೆ ಸ್ಪಷ್ಟೀಕರಣ ಆದೇಶ ನೀಡಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ನಮ್ಮ ನಡೆ ಶಿಕ್ಷಕರ ಕಡೆ, ಶಿಕ್ಷಣ ಸಂಸ್ಥೆಗಳು – ಶಿಕ್ಷಕರು ಉಳಿದರೆ ಶಿಕ್ಷಣ ಶೀರ್ಷಿಕೆ ಅಡಿಯಲ್ಲಿ ಬೆಳಿಗ್ಗೆ 10ಕ್ಕೆ ಬೆಂಗಳೂರಿನ ಮೌರ್ಯ ವೃತ್ತದಿಂದ ಫ್ರೀಡಂ ಪಾರ್ಕ್‍ವರೆಗೆ ರ‍್ಯಾಲಿನಡೆಸಲಾಗುವುದು. ಕರೊನಾ ಹಿನ್ನೆಲೆಯಲ್ಲಿ, ಸುರಕ್ಷತೆಯ ದೃಷ್ಟಿಯಿಂದ, ದೊಡ್ಡಬಳ್ಳಾಪುರ ತಾಲೂಕಿನ ಸುಮಾರು 250 ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ದೊಡ್ಡಬಳ್ಳಾಪುರ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಎ.ಸುಬ್ರಮಣಿ ಹಾಗೂ ಕಾರ್ಯದರ್ಶಿ ಎಸ್.ಆರ್.ರಮೇಶ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

