ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರತ್ನಮ್ಮಜಯರಾಂ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಪಕ್ಷದ ವರಿಷ್ಠರು ನೀಡಿದ ಅವಧಿಯಲ್ಲಿ ತಾಲೂಕಿನ ಅಭಿವೃದ್ಧಿಗೆ ಸಾಧ್ಯವಾದಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ, ಕರೊನಾ ಸಂಧರ್ಭದಲ್ಲಿ ಸಿಕ್ಕ ಅಧಿಕಾರವಧಿಯಲ್ಲಿ ಕೈಗೊಳ್ಳಲಾದ ಕ್ರಮಗಳು ಆತ್ಮತೃಪ್ತಿ ನೀಡಿದೆ ಎಂದರು.
ಇದೇ ವೇಳೆ ಅಧ್ಯಕ್ಷ ಸ್ಥಾನದ ಅವಕಾಶ ನೀಡಿದ ಸಲಹೆ, ಸಹಕಾರ ನೀಡಿದ ಶಾಸಕ ಟಿ.ವೆಂಕಟರಮಣಯ್ಯ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್, ಜಿಪಂ ಸದಸ್ಯ ಚುಂಚೇಗೌಡ, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್, ತಿ.ರಂಗರಾಜು, ಬಿ.ಹೆಚ್.ಕೆಂಪಣ್ಣ ಹಾಗೂ ತಾಪಂ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು. ಈ ವೇಳೆ ಮುಖಂಡರಾದ ರಾಜಣ್ಣ, ಸಂದೇಶ್ ಇದ್ದರು.
ಪೂರ್ವ ನಿರ್ಣಯದಂತೆ ಪಕ್ಷದ ಹೈಕಮಾಂಡ್ ನಿಲುವಿಗೆ ಬದ್ದರಾಗಿ ರತ್ನಮ್ಮಜಯರಾಂ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದ್ದು, ತಾಪಂ ಸದಸ್ಯ ನಾರಾಯಣಗೌಡ ಅಧ್ಯಕ್ಷರಾಗುವ ಸಾಧ್ಯತೆ ಇದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

