ದೊಡ್ಡಬಳ್ಳಾಪುರ: ತಾಲೂಕಿನ ವಿವಿಧ ದೇವಾಲಯಗಳಲ್ಲಿ ಕಾರ್ತಿಕ ಅಮಾವಾಸ್ಯೆಯ ಅಂಗವಾಗಿ ಲಕ್ಷ ದೀಪೋತ್ಸವ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ರಾಮಲಿಂಗ ಚೌಡೇಶ್ವರಿ, ಶ್ರೀ ಸಪ್ತಮಾತೃಕಾ ಮಾರಿಯಮ್ಮ ದೇವಾಲಯ, ಶ್ರೀ ವೈಕುಂಠ ಜನಾರ್ಧನ ಸ್ವಾಮಿ, ಸೋಮೇಶ್ವರ ಬಡಾವಣೆಯ ಜ್ಯೋತಿಲಿಂಗೇಶ್ವರ ಸ್ವಾಮಿ,ಬೆಟ್ಟದ ಸೊಣ್ಣೆನಹಳ್ಳಿಯ ಬಿಲ್ವವೃಕ್ಷ ನಂಜುಂಡೇಶ್ವರ, ಪಾಲನಜೋಗಿಹಳ್ಳಿ ವರಸಿದ್ಧಿ ವಿನಾಯಕ ಸ್ವಾಮಿ ದೇವಾಲಯಗಳಲ್ಲಿ ಲಕ್ಷ ದೀಪೋತ್ಸವ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.
ಶ್ರೀ ರಾಮಲಿಂಗ ಚೌಡೇಶ್ವರಿ, ಶ್ರೀ ಸಪ್ತಮಾತೃಕಾ ಮಾರಿಯಮ್ಮ ದೇವಾಲಯಗಳಲ್ಲಿ ದೇವತಾಮೂರ್ತಿಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಭಕ್ತಾದಿಗಳು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ದೀಪೋತ್ಸವದಲ್ಲಿ ಭಾಗವಹಿಸಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

