ದೊಡ್ಡಬಳ್ಳಾಪುರ: ಇದೇ ಡಿಸೆಂಬರ್ ತಿಂಗಳಿಗೆ ಸಂಬಂಧಿಸಿದ ಪಡಿತರ ಆಹಾರ ಧಾನ್ಯವನ್ನು ಬಿಡುಗಡೆ ಮಾಡಲಾಗಿದ್ದು, ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯ ಪಡೆದುಕೊಳ್ಳಬಹುದೆಂದು ಆಹಾರ ಶಿರಸ್ತೆದಾರ್ ರಮೇಶ್ ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಗೆ ಅವರು ನೀಡಿರುವ ಮಾಹಿತಿಯಂತೆ, ಅಂತ್ಯೋದಯ ಪಡಿತರ ಚೀಟಿ ಕಾರ್ಡ್ ದಾರರಿಗೆ ಪ್ರತಿ ಕಾರ್ಡಿಗೆ ಉಚಿತವಾಗಿ 35 ಕೆಜಿ ಅಕ್ಕಿ ಹಾಗೂ 1 ಕೆ.ಜಿ ಕಡಲೆ ಕಾಳು ವಿತರಿಸಲಾಗುವುದು.
ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ, 2 ಕೆ.ಜಿ ಗೋಧಿ, ಪ್ರತಿ ಕಾರ್ಡ್ಗೆ 1 ಕೆ.ಜಿ ಕಡಲೆಕಾಳು ಉಚಿತವಾಗಿ ವಿತರಿಸಲಾಗುವುದು.
ಎಪಿಎಲ್ ಪಡಿತರ ಚೀಟಿ ಹೊಂದಿರುವ, ಒಪ್ಪಿಗೆ ನೀಡಿದ ಪಡಿತರ ಚೀಟಿಗೆ ಪ್ರತಿ ಕೆ.ಜಿ ಗೆ ರೂ.15 ರಂತೆ ಏಕ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ 2 ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆ.ಜಿ ಅಕ್ಕಿ ವಿತರಿಸಲಾಗುವುದು.
ಅಂತರರಾಜ್ಯ ಹಾಗೂ ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಕಡ್ಡಾಯವಾಗಿ ಬೆರಳಚ್ಚು ಮೂಲಕ ಹಾಗೂ ಬೆರಳಚ್ಚು ಬಾರದ ಕಾರ್ಡ್ ದಾರರು ಆಧಾರ್ ಓ.ಟಿ.ಪಿ ಮೂಲಕ ಪಡಿತರ ವಿತರಣೆ ಮಾಡಲಾಗಿದೆ. ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರದಲ್ಲಿ ನಿಂತು ಪಡಿತರ ಆಹಾರಧಾನ್ಯ ಪಡೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಈ ಮುನ್ನ ಕೋವಿಡ್-19 ಹಿನ್ನಲೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನಯೋಜನೆಯ ಹೆಚ್ಚುವರು ಪಡಿತರ ನೀಡಲಾಗುತ್ತಿದ್ದು, ಈ ತಿಂಗಳು ಪೂರೈಕೆ ನಿಲ್ಲಿಸಿರುವ ಕಾರಣ ಪಡಿತರ ವಿತರಣೆಯಲ್ಲಿ ಬದಲಾವಣೆಯಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

