ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಮೊದಲ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯ ನಾಮಪತ್ರ ಸಲ್ಲಿಕೆಯು ಕೊನೆಯಾಗಿದ್ದು(ದಿನಾಂಕ: 07.12.2020 ರಿಂದ 11.12.2020 ರವರೆಗೆ) ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನ ಒಟ್ಟು 47 ಗ್ರಾಮ ಪಂಚಾಯತಿಯ 856 ಸ್ಥಾನಗಳಲ್ಲಿ ನೆಲಮಂಗಲದ 21 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿವೆ.
ಸಲ್ಲಿಕೆಯಾಗಿರುವ ಒಟ್ಟು 3267 ನಾಮಪತ್ರಗಳ ಪೈಕಿ 44 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 64 ಸದಸ್ಯರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ 771 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಹೊಸಕೋಟೆ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳ 494 ಸ್ಥಾನಗಳಿಗೆ ಸಲ್ಲಿಕೆಯಾಗಿರುವ ಒಟ್ಟು 1848 ನಾಮಪತ್ರಗಳ ಪೈಕಿ 23 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 43 ಸದಸ್ಯರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ 451 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ನೆಲಮಂಗಲ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳ 362 ಸ್ಥಾನಗಳಿಗೆ ಸಲ್ಲಿಕೆಯಾಗಿರುವ ಒಟ್ಟು 1419 ನಾಮಪತ್ರಗಳ ಪೈಕಿ 21 ನಾಮಪತ್ರಗಳು ತಿರಸ್ಕೃತಗೊಂಡಿದ್ದು, 21 ಸದಸ್ಯರ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ
320 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 21 ಸ್ಥಾನಗಳಿಗೆ ಯಾವುದೇ ನಾಮ ಪತ್ರ ಸಲ್ಲಿಕೆಯಾಗದೆ ಖಾಲಿ ಉಳಿದಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

