ಬೆಂಗಳೂರು: ಖಾಸಗಿ ಶಾಲಾ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಇಂದು ಖಾಸಗಿ ಶಾಲಾ ಆಡಳಿತ ಮಂಡಳಿ, ರಾಜ್ಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಪ್ರತಿಭಟನೆ ನಡೆಸಲಾಗುತ್ತಿದೆ.
ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ‘ಶಿಕ್ಷಕರು ಉಳಿದರೆ ಶಿಕ್ಷಣ’ ಎಂಬ ಶೀರ್ಷಿಕೆಯಡಿ ಪ್ರತಿಭಟನೆ ನಡೆಸಲಾಗುತ್ತಿದೆ.
ಬೆಂಗಳೂರಿನ ಮೌರ್ಯ ಸರ್ಕಲ್ ನಿಂದ ಫ್ರೀಡಂ ಪಾರ್ಕ್ಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳು ಜಾಥಾ ನಡೆಸುತ್ತಿರುವ ಶಿಕ್ಷಕರು, ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೆಲಸ ಕಳೆದುಕೊಂಡ ಶಿಕ್ಷಕರು ತರಕಾರಿ ಮಾರಾಟ, ಡ್ರೈವರ್ ಕೆಲಸ ಮಾಡುವಂತಾಗಿದೆ ಎಂದು ಅದೇ ವೇಷ ತೊಟ್ಟು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ನೂರಾರು ಸಂಖ್ಯೆಯಲ್ಲಿ ಖಾಸಗಿ ಶಾಲಾ ಶಿಕ್ಷಕರು ಆಗಮಿಸಿದ್ದು, ಖಾಸಗಿ ಶಾಲಾ ಶಿಕ್ಷಕರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಶಿಕ್ಷಕರು ಆಗಮಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

