ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಕೋವಿಡ್-19 ಬುಲೆಟಿನ್ ಮಾಹಿತಿಯಂತೆ ತಾಲೂಕಿನ 6 ಜನರಿಗೆ ಸೋಂಕು ಧೃಡ ಪಟ್ಟಿದೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ ಬುಧವಾರದ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ ಮೂವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿ 6ಜನರಿಗೆ ಸೋಂಕು ದೃಢಪಟ್ಟಿದೆ.
ತಾಲ್ಲೂಕಿನಲ್ಲಿ ಹೆಚ್ಚುತ್ತಿರುವ ಕರೊನಾ ಸೋಂಕಿನ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ ಆತಂಕ ವ್ಯಕ್ತಪಡಿಸಿದ್ದು, ಸೋಂಕು ಹೆಚ್ಚಳಕ್ಕೆ ಕಾರಣವೇನೆಂದು ಪ್ರಶ್ನಿಸಿ ಆತಂಕ ವ್ಯಕ್ತಪಡಿಸಿದರು.
ಪ್ರಸ್ತುತ ತಾಲೂಕಿನಲ್ಲಿ 4665 ಮಂದಿಗೆ ಕರೊನಾ ಸೋಂಕು ತಗುಲಿದ್ದು 4602 ಮಂದಿ ಗುಣಮುಖರಾಗಿದ್ದರೆ, ಸಕ್ರಿಯ ಕರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ 63 ಆಗಿದೆ.
ಉಳಿದಂತೆ ಸೋಂಕಿಗೆ ಒಳಗಾದ 7 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 56 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

