ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕನ್ನಡ ಭಾಷೆ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ವಿಷಯಗಳ ಪಿ.ಹೆಚ್.ಡಿ. ಮತ್ತು ಎಂ.ಫಿಲ್. ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸಹಾಯಧನಕ್ಕಾಗಿ ಸೇವಾಸಿಂಧು ಮೂಲಕ ಹಾಗೂ ಸೃಜನೇತರ ಪ್ರಕಟಿತ ಗ್ರಂಥಗಳಿಗೆ ನೇರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
2019-20ನೇ ಸಾಲಿನಲ್ಲಿ ವಿಶ್ವವಿದ್ಯಾನಿಲಯಗಳಿಂದ, ಯಾವುದೇ ವಿಷಯದ ಬಗ್ಗೆ ಕನ್ನಡದಲ್ಲಿ ಎಂ.ಫಿಲ್. ಪದವಿ
ಪಡೆದ ಪ್ರೌಢಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸಹಾಯಧನ, 2019-20ನೇ ಸಾಲಿನಲ್ಲಿ ವಿಶ್ವವಿದ್ಯಾನಿಲಯಗಳಿಂದ ಯಾವುದೇ ವಿಷಯದ ಬಗ್ಗೆ ಕನ್ನಡದಲ್ಲಿ ಪಿ.ಹೆಚ್.ಡಿ. ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸಹಾಯಧನ ಹಾಗೂ 2019ರ ಜನವರಿಯಿಂದ ಡಿಸೆಂಬರ್ 2019ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಸೃಜನೇತರ ಕನ್ನಡ ಗ್ರಂಥಗಳಿಗೆ ಸಹಾಯಧನ ನೀಡಲಾಗುವುದು.
ಸೃಜನೇತರ ಪ್ರಕಟಿತ ಗ್ರಂಥಗಳಿಗೆ ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ವೆಬ್ ಸೈಟ್ www.kannadasiri.in ನಲ್ಲಿ ಪಡೆಯಬಹುದಾಗಿದ್ದು, ಅರ್ಜಿ ಸಲ್ಲಿಸಲು 2021ರ ಜನವರಿ 16 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ,ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ದೂ.ಸಂ.: 080-29560059 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕ ಬಿ.ಮಂಜುನಾಥ ಆರಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

