ಬೆಂಗಳೂರು: ರಾಜ್ಯದಲ್ಲಿ ಜನವರಿ ಮೊದಲ ದಿನದಿಂದಲೇ ಪರಿಷ್ಕೃತ ರೂಪದ ವಿದ್ಯಾಗಮ ಜಾರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ಮಕ್ಕಳ ಶೈಕ್ಷಣಿಕ ಹಿತದೃಷ್ಟಿ ಮತ್ತು ಕಲಿಕೆಯ ನಿರಂತರತೆ ದೃಷ್ಟಿಯಿಂದ ಪರಿಷ್ಕೃತ ರೂಪದ ವಿದ್ಯಾಗಮ ಜ.1ರಿಂದ ಜಾರಿಗೆ ಬರಲಿದೆ. ಈ ಸಂಬಂಧ ಸುರಕ್ಷತಾ ಮಾರ್ಗಸೂಚಿ, ಎಸ್ಒಪಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ವಿದ್ಯಾಗಮ ತರಗತಿ ಹೇಗಿರಬೇಕು. ವೇಳಾಪಟ್ಟಿ ಇತ್ಯಾದಿಗಳನ್ನು ಇಲಾಖೆ ಬಿಡುಗಡೆ ಮಾಡಿದೆ.
ಗ್ರಾಮೀಣ ಪ್ರದೇಶದ ಮಕ್ಕಳ ಹಿತದೃಷ್ಟಿಯಿಂದಲೇ ವಿದ್ಯಾಗಮ ಯೋಜನೆ ಪುನರಾರಂಭಿಸಲಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಆನ್ ಲೈನ್ ತರಗತಿಗಳಿಗೆ ನೆಟ್ ವರ್ಕ್ ಸಮಸ್ಯೆ, ವಿದ್ಯುತ್ ಸಮಸ್ಯೆ, ಆಂಡ್ರಾಯ್ಡ್ ಮೊಬೈಲ್ ಗಳ ಕೊರತೆ ಹೀಗೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಾಗಾಗಿ ನಗರಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವಿದ್ಯಾಗಮ ಯೋಜನೆಯನ್ನು ಸುಧಾರಿತ ಕ್ರಮಗಳೊಂದಿಗೆ ಮತ್ತೆ ಆರಂಭಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿದ್ಯಾಗಮ ಯೋಜನೆ ಕೇವಲ ಸರ್ಕಾರಿ ಶಾಲೆಗಳಿಗೆ ಸೀಮಿತವಾಗಿಲ್ಲ. ಖಾಸಗಿ ಶಾಲೆಗಳು ಸಹ 1 ರಿಂದ 10ನೇ ತರಗತಿವರೆಗೆ ವಿದ್ಯಾಗಮ ಮಾಡಲು ಅವಕಾಶವಿದೆ. ಇದು ಯಾವ ವಿದ್ಯಾರ್ಥಿಗೂ ಕಡ್ಡಾಯವಲ್ಲ. ತಂದೆ-ತಾಯಿ ಒಪ್ಪಿಗೆ ಕೊಟ್ಟರೆ ಮಾತ್ರ ವಿದ್ಯಾರ್ಥಿಗಳು ಬರಬಹುದು. ಅವರು ಮಾಸ್ಕ್ ಹಾಕಿಕೊಂಡು ಬರಬೇಕು. ಅವರಿಗೆ ಆರೋಗ್ಯದಲ್ಲಿ ತೊಂದರೆಗಳಿದ್ದರೆ ಅವರು ಗುಣಮುಖರಾಗುವವರೆಗು ಬರುವಂತಿಲ್ಲ ಎಂದು ತಿಳಿಸಿದರು.
(ಸಂಗ್ರಹ ಚಿತ್ರ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

