ಮೈಸೂರು: ಮಕ್ಕಳಿಗೆ ಆಹಾರವೇ ಔಷಧ. ಮಕ್ಕಳ ಆರೋಗ್ಯ ವೃದ್ದಿಸಲು ಅವರಿಗೆ ಆಹಾರದ ಮಹತ್ವವನ್ನು ತಿಳಿಸಿ, ಜೊತೆಗೆ ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವಂತೆ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆಯ ವತಿಯಿಂದ 2020-21 ನೇಸಾಲಿನ ಎಸ್.ಸಿ.ಪಿ. ಯೋಜನೆಯಡಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಿಗೆ ಆಹಾರ ಪದ್ಧತಿಯಲ್ಲಿ ಪೌಷ್ಟಿಕ ಆಹಾರಗಳ ಅಳವಡಿಕೆ ಕುರಿತು ಗುರುವಾರ ಆಯೋಜಿಸಿದ್ದ ತರಬೇತಿ ಉದ್ಘಾಟಿಸಿ ಅವರು ಮಾತಾನಾಡಿದರು.
ವಿದ್ಯಾರ್ಥಿ ನಿಲಯದ ವಾರ್ಡನ್‍ಗಳು ಮೊದಲು ತಮ್ಮ ಮನೆಗಳಲ್ಲಿ ಪೌಷ್ಟಿಕ ಆಹಾರ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು. ತಮ್ಮ ಹಾಗೂ ವಿದ್ಯಾರ್ಥಿ ನಿಲಯದ ಮಕ್ಕಳ ಆರೋಗ್ಯವನ್ನು ವೃದ್ದಿಸುವಲ್ಲಿ ಕಾಳಜಿ ವಹಿಸಬೇಕು ಎಂದು ಹೇಳಿದರು.
ಈ ತರಬೇತಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ, ಪ್ರಭಾ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮುನಿರಾಜು, ಡಾ.ವಿನಯ ಹಾಗೂ ಆಯುಷ್ ಇಲಾಖೆಯ ಡಾ.ಸೀತಾಲಕ್ಷ್ಮಿರವರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

