ಸಮಾಜಮುಖಿ ಚಿಂತಕ ಆರ್.ಎನ್. ಶೆಟ್ಟಿ ಇನ್ನಿಲ್ಲ

ಬೆಂಗಳೂರು: ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕರು ಹಾಗೂ ಸಮಾಜಮುಖಿ ಚಿಂತಕ ಮತ್ತು ದಾನಿ, ಆರ್.ಎನ್. ಶೆಟ್ಟಿ (92) ಗುರುವಾರ ಡಿ.17ರ ನಸುಕಿನ 2 ಗಂಟೆ ಸುಮಾರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 

ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು, ಅಂತ್ಯಸಂಸ್ಕಾರ ಸಂಜೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಆರ್. ಎನ್. ಶೆಟ್ಟಿ ಅವರ ಸಾಧನೆ – ಸಾಕಾರ: ಉತ್ತರ ಕನ್ನಡ ಜಿಲ್ಲೆಯ ಪವಿತ್ರ ಪುಣ್ಯ ಕ್ಷೇತ್ರ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ ಆರ್.ಎನ್. ಶೆಟ್ಟಿ ಅವರು ರಾಜ್ಯದ ಮತ್ತು ದೇಶದ ಪ್ರಗತಿಗೆ ತಮ್ಮದೇ ಕೊಡುಗೆ ನೀಡಿದ್ದ ಹೆಸರಾಂತ ಉದ್ಯಮಿಯಾಗಿದ್ದರು. 

ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ಔದ್ಯಮಿಕ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲಸೌಕರ್ಯ, ವಿದ್ಯುತ್ ಹಾಗೂ ನೀರಾವರಿ ಕ್ಷೇತ್ರ ಸೇರಿದಂತೆ ವಿವಿಧ ರಂಗಗಳಲ್ಲಿ ಆರ್.ಎನ್. ಶೆಟ್ಟಿ ಅವರು ಛಾಪು ಮೂಡಿಸಿದ್ದರು. ಕರ್ನಾಟಕದ ಅಭಿವೃದ್ಧಿಗೂ ಅವರು ನೀಡಿರುವ ಕೊಡುಗೆ ಅಸಾಧಾರಣ.

1961ರಲ್ಲಿ ಮೂಲಸೌಕರ್ಯ ಕಂಪನಿ ಹುಟ್ಟು ಹಾಕಿದ  ಆರ್.ಎನ್. ಶೆಟ್ಟಿ ಅವರು, ಹಿಡಕಲ್ ಜಲಾಶಯ, ತಟ್ಟಿಹಳ್ಳ ಜಲಾಶಯ, ಸೂಪ ಜಲಾಶಯ, ಗೇರುಸೊಪ್ಪ ಜಲಾಶಯ, ಮಾಣಿ ಅಣೆಕಟ್ಟೆ, ವಾರಾಹಿ ಜಲ ವಿದ್ಯುತ್ ಯೋಜನೆ, ಕೆ.ಎಲ್.ಇ. ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ, ಕೊಂಕಣ ರೈಲು ಸುರಂಗ, ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವೇ ಮೊದಲಾದ ಹತ್ತು ಹಲವು ಮಹತ್ವದ ಜನೋಪಯೋಗಿ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಮೈಲುಗಲ್ಲಿನ ಸಾಧನೆ ಮಾಡಿದ್ದಾರೆ.

ಬಾಲ್ಯದಿಂದಲೇ ತಾವು ನಂಬಿದ, ನಿತ್ಯ ಪೂಜಿಸುತ್ತಿದ್ದ ಮುರುಡೇಶ್ವರದ ಪುರಾತನ ಶಿವ ದೇವಾಲಯದ ನವೀಕರಣ ಕೈಂಕರ್ಯದಲ್ಲಿ ಮಹತ್ವದ ಪಾತ್ರ ವಹಿಸಿದ ಅವರು, 249 ಅಡಿ ಎತ್ತರದ ಭವ್ಯ ಗೋಪುರ ಮತ್ತು ಬೆಟ್ಟದ ಮೇಲೆ 123 ಅಡಿ ಎತ್ತರದ ಭವ್ಯ ಶಿವನ ಮೂರ್ತಿಯನ್ನು ಸ್ಥಾಪಿಸುವ ಮೂಲಕ ಮುರುಡೇಶ್ವರವನ್ನು ಒಂದು ಪವಿತ್ರ ಪುಣ್ಯತಾಣ ಹಾಗೂ ಪ್ರವಾಸೋದ್ಯಮ ಕೇಂದ್ರವಾಗಿಯೂ ಪರಿವರ್ತಿಸಿದ್ದಾರೆ. ನಿತ್ಯ ಸಾವಿರಾರು ಭಕ್ತರು ಈ ಕ್ಷೇತ್ರಕ್ಕೆ ಭೇಟಿ ನೀಡುವಂತೆ ಅಭಿವೃದ್ಧಿಪಡಿಸಿದ್ದರು

ಆರ್.ಎನ್.ಶೆಟ್ಟಿ ಟ್ರಸ್ಟ್ ವತಿಯಿಂದ ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಶಿಕ್ಷಣದವರೆಗೆ ವಿದ್ಯಾದಾನ ಮಾಡುತ್ತಿದ್ದಾರೆ. ಆರ್.ಎನ್.ಎಸ್. ಅವರ ಈ ಎಲ್ಲ ಮಹತ್ವಾಕಾಂಕ್ಷೆಯ ಸತ್ಕಾರ್ಯಗಳಿಗೆ ಅವರ ಕುಟುಂಬದ ಸದಸ್ಯರೆಲ್ಲರೂ ಒತ್ತಾಸೆಯಾಗಿ ನಿಂತಿದ್ದರು. ಇವರ ಈ ಅಸಾಧಾರಣ ಸೇವೆಗೆ ಸರ್.ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ, ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕಾಸಿಯಾದ ಕೈಗಾರಿಕಾ ರತ್ನ ಪ್ರಶಸ್ತಿಯೇ ಮೊದಲಾದ ಹತ್ತು ಹಲವು ಗೌರವಗಳು ಸಂದಿವೆ.

ಸಮಾಜದ ಒಳಿತಿಗಾಗಿ ಕಂಡ ಕನಸುಗಳನ್ನು ನನಸು ಮಾಡಿದ ಸಾಧಕ, ಅಸಾಧ್ಯವಾದುದನ್ನೂ ಸಾಧಿಸಿ ತೋರಿಸಿದ ಸಮಾಜಮುಖಿ ಚಿಂತಕ ಆರ್.ಎನ್. ಶೆಟ್ಟಿ ಅವರು ಇತ್ತೀಚೆಗಷ್ಟೇ ಕೋವಿಡ್ ಸಂದರ್ಭದಲ್ಲಿ ಪಿಎಂ ಕೇರ್ಸ್ ಗೆ 2.4 ಕೋಟಿ ರೂಪಾಯಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ 5 ಲಕ್ಷ ರೂಪಾಯಿ ಸೇರಿ ಒಟ್ಟು 3 ಕೋಟಿ 9 ಲಕ್ಷ ರೂ. ದೇಣಿಗೆ ನೀಡಿದ್ದರು. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ 

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]