ಬೆಂಗಳೂರು: ಇತ್ತೀಚಿಗೆ ರಾಜ್ಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ನಡೆಸಿದ ಮುಷ್ಕರದ ಸಮಯದಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳ ಮೇಲೆ ದೈಹಿಕ ಹಲ್ಲೆ ಮಾಡಿ ,ಬಸ್ಸುಗಳನ್ನು ಜಖಂಗೊಳಿಸಿದ ಹಾಗೂ ದೂರು ದಾಖಲಾದ ಕೆಲವೇ ಸಿಬ್ಬಂದಿಗಳ ಮೇಲೆ ಮಾತ್ರ ನಿಯಮಾನುಸಾರ ಕ್ರಮಕೈಗೊಳ್ಳಲಾಗಿದ್ದು, ಇನ್ನಾವುದೆ ಸಿಬ್ಬಂದಿ ಮೇಲೆ ಕ್ರಮಕೈಗೊಂಡಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಪಷ್ಟಪಡಿಸಿದೆ.
ರಾಜ್ಯಾದ್ಯಂತ ನಡೆದ ಮುಷ್ಕರದಲ್ಲಿ ಕೋಲಾರ ವಿಭಾಗದಲ್ಲಿ 200 ನೌಕರರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದು ಸತ್ಯಕ್ಕೆ ದೂರವಾದದ್ದು. ಕೆ ಎಸ್ ಆರ್ ಟಿ ಸಿ ವ್ಯಾಪ್ತಿಯಲ್ಲಿ ಒಟ್ಟು 13 ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ.
ಮುಷ್ಕರ ಸಮಯದ ನಾಲ್ಕು ದಿನಗಳ ವೇತನ ಪಾವತಿ ಕಡಿತದ ಬಗ್ಗೆಯೂ ಇನ್ನೂ ಯಾವುದೇ ಕ್ರಮತೆಗೆದುಕೊಂಡಿರುವುದಿಲ್ಲ, ಮಂಡಳಿ/ಸರ್ಕಾರದ ಮಟ್ಟದಲ್ಲಿ ಇದರ ಬಗ್ಗೆ ಚರ್ಚಿಸಿ ಕ್ರಮತೆಗೆದುಕೊಳ್ಳಲಾಗುವುದು.
ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ಮಂಡಳಿ/ಸರ್ಕಾರದ ಮಟ್ಟದಲ್ಲಿ ಇದರ ಬಗ್ಗೆ ಚರ್ಚಿಸಿ ಕ್ರಮತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
(ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

