ವೈರಲ್ ಆದ ಕರಪತ್ರ: ಪ್ರಣಾಳಿಕೆ ಬಿಡುಗಡೆ ಮಾಡಿದ ಗಂಗಮ್ಮರಿಗೆ ಕಾನೂನು ಸಂಕಷ್ಟ…?

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ತುಮಕೂರು ಜಿಲ್ಲೆಯ ಹೆಬ್ಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕೆರೆ ಕ್ಷೇತ್ರದಿಂದ ಸ್ಪರ್ಧಿಸಿರುವ ಅಭ್ಯರ್ಥಿ ಗಂಗಮ್ಮ.ಹೆಚ್ ಅವರ ಪ್ರಚಾರದ ಕರಪತ್ರದಲ್ಲಿನ ಪ್ರಣಾಳಿಕೆ ಕಾನೂನು ಸಂಕಷ್ಟ ತಂದೊಡ್ಡಿದೆ.

ಚುನಾವಣೆಗೆ ಸ್ಪರ್ಧಿಸಿರುವ ಗಂಗಮ್ಮ ಅವರಿಗೆ ಪಾದರಕ್ಷೆ ಗುರುತು ದೊರಕಿದ್ದು, ಗೆದ್ದರೆ ಮತ್ತು ಸೋತರೆ ಮಾಡುವ ಕೆಲಸಗಳ ಪಟ್ಟಿಯನ್ನು ಅವರು ಕರಪತ್ರದಲ್ಲಿ ಮುದ್ರಿಸಿದ್ದರು, ಈ ಕರಪತ್ರ ರಾಜ್ಯಾದ್ಯಂತ ವೈರಲ್ ಆಗಿ ಚರ್ಚೆಗೆ ಕಾರಣವಾಗಿದ್ದಲ್ಲದೆ, ಪರ ವಿರೋಧ ಚರ್ಚೆಗೆ ಕಾರಣವಾಗಿದೆ, ಮುಂದುವರೆದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ‘ಇದೊಂದು ವಿನೂತನ ಚುನಾವಣಾ ಪ್ರಚಾರ ಪತ್ರ. ಇಂತಹದ್ದನ್ನು ಇಲ್ಲಿಯವರೆಗೂ ನೋಡಿರಲಿಲ್ಲ’ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಈ ಕುರಿತು ದೊಡ್ಡಬಳ್ಳಾಪುರದ ನ್ಯಾಯವಾದಿ ಟಿ.ಕೆ.ಹನುಮಂತರಾಜ್ ಎನ್ನುವವರು, ಗಂಗಮ್ಮ ಕರಪತ್ರದಲ್ಲಿನ ಪ್ರಣಾಳಿಕೆ ಗ್ರಾಮದ ಮತದಾರರಲ್ಲಿ ಭಯ ಹುಟ್ಟಿಸಿ ಮತ ಪಡೆಯುವ ಉದ್ದೇಶ ಹೊಂದಿರುವುದು ಕಾನೂನು ಬಾಹಿರವಾಗಿರುತ್ತದೆ. ಆದರಿಂದ ಹೆಬ್ಬೂರು ಗ್ರಾಮ ಪಂಚಾಯಿತಿಯ, ಕಲ್ಕೆರೆ ಗ್ರಾಮದ ಅಭ್ಯರ್ಥಿ ಗಂಗಮ್ಮ.ಹೆಚ್. (ಗುರುತು “ಪಾದರಕ್ಷೆಗಳು”) ಕ್ರಮ ಸಂಖ್ಯೆ.2 ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳ ಬೇಕೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ, ತುಮಕೂರು ಜಿಲ್ಲಾಧಿಕಾರಿ, ಜಿಪಂ ಸಿಇಒ, ಇಒ ಗಳಿಗೆ ಇಮೇಲ್ ಮೂಲಕ ದೂರನ್ನು ನೀಡಿದ್ದಾರೆ.

ಕರಪತ್ರ ರಾಜ್ಯಾದ್ಯಂತ ವೈರಲ್ ಆಗಿ ರಾತ್ರೋರಾತ್ರಿ ಪ್ರಸಿದ್ಧಿ ಪಡೆದಿದ್ದ ಗಂಗಮ್ಮ, ಈಗ ಕಾನೂನಿನ ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎನ್ನಲಾಗುತ್ತಿದೆ.

ಗಂಗಮ್ಮರ ಕರಪತ್ರದಲ್ಲಿನ ಪ್ರಣಾಳಿಕೆ/ ಗೆದ್ದರೆ: ಕರೇತಿಮ್ಮರಾಯಸ್ವಾಮಿ ದೇವಸ್ಥಾನದ ಇನಾಮ್ ಜಮೀನನ್ನು ಮೂಲ ಖಾತೆಯಂತೆ ದೇವರ ಹೆಸರಿಗೆ ಮಾಡುವೆ, ಅರಳೀಕಟ್ಟೆ ಕಟ್ಟಿಸುವೆ, ಚಿಕ್ಕಸಾಸಲಯ್ಯನ ಮನೆ ಹತ್ತಿರದಿಂದ ದೊಡ್ಡಕರೇಕಲ್‌ವರೆಗೆ ರಸ್ತೆ ಮಾಡಿಸುವೆ, ಊರ ಮುಂದೆ ಮಳೆ ನೀರು ರಸ್ತೆಗೆ ಹರಿಯದೆ ಸರಾಗವಾಗಿ ಹರಿಯಲು ಸಗ್ಗಯ್ಯನ ತಿಪ್ಪಾಳದಿಂದ ಹೊಂಬಯ್ಯನ ಗದ್ದೆವರೆಗೆ ಸಿಸಿ ಚರಂಡಿ ಮಾಡಿಸುವೆ ಎಂದು ತಿಳಿಸಿದ್ದಾರೆ.

ಸೋತರೆ: ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿ ರದ್ದು ಮಾಡಿಸುವೆ, ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಪಡೆದಿರುವ 40 ಕುಟುಂಬಗಳ ಮಾಸಾಶನ ಹಣ ನಿಲ್ಲಿಸುವೆ, ಸರ್ವೆ ನಂ 86ರಲ್ಲಿ ಹಳೇ ದಾಖಲೆಯಂತೆ ಸ್ಮಶಾನ ಮಾಡಿಸುವೆ, ಕಲ್ಕೆರೆ ಗ್ರಾಮ ಠಾಣಾ ಜಾಗವನ್ನು ಯಾವುದೇ ಮೂಲ ದಾಖಲಾತಿ ಇಲ್ಲದೆ 11 ಕುಟುಂಬಗಳು ಒತ್ತುವರಿ ಮಾಡಿರುವ ಜಾಗವನ್ನು 1948ರ ಗ್ರಾಮದ ಹೌಸ್‌ಲೀಸ್ಟ್‌ನಂತೆ ತೆರವುಗೊಳಿಸಲು ಹೋರಾಟ ಮಾಡಲಾಗುವುದು ಎಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]