ಬೆಂ.ಗ್ರಾ.ಜಿಲ್ಲೆ: ಡಿ.22ರಂದು ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ: ಒಟ್ಟು 249615 ಮತದಾರರು

ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಮೊದಲ ಹಂತದ ಗ್ರಾಮ ಪಂಚಾಯಿತಿಯ ಚುನಾವಣೆಯು ಡಿಸೆಂಬರ್ 22 ರಂದು ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ ಒಟ್ಟು 47 ಗ್ರಾಮ ಪಂಚಾಯಿತಿಗಳ ಪೈಕಿ 46 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. 

ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕಿನ 46 ಗ್ರಾಮ ಪಂಚಾಯಿತಿಗಳ ಒಟ್ಟು 375 ಕ್ಷೇತ್ರಗಳ, 771 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂತಿಮವಾಗಿ 2040 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎರಡೂ ತಾಲ್ಲೂಕುಗಳಿಂದ ಒಟ್ಟು 426 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, 125381 ಪುರುಷ ಮತದಾರರು, 124205 ಮಹಿಳಾ ಮತದಾರರು ಹಾಗೂ 29 ಇತರೆ ಮತದಾರರು ಸೇರಿದಂತೆ ಒಟ್ಟು 249615 ಮತದಾರರಿದ್ದಾರೆ.

ಹೊಸಕೋಟೆ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳ ಒಟ್ಟು 211 ಕ್ಷೇತ್ರಗಳ 451 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂತಿಮವಾಗಿ 1050 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 241 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, 71649 ಪುರುಷ ಮತದಾರರು, 70698 ಮಹಿಳಾ ಮತದಾರರು ಹಾಗೂ 05 ಇತರೆ ಮತದಾರರು ಸೇರಿದಂತೆ ಒಟ್ಟು 142352 ಮತದಾರರಿದ್ದಾರೆ. 

ಹೊಸಕೋಟೆ ತಾಲ್ಲೂಕಿನ 241 ಮತಗಟ್ಟೆಗಳಿಗೆ 241 ಪಿ.ಆರ್.ಓ., 241 ಎ.ಪಿ.ಆರ್.ಓ., 482 ಪಿ.ಓ.ಗಳು, ಸೇರಿದಂತೆ 964 ಮತಗಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಶೇ. 10% ರಷ್ಟು ಅಂದರೆ 97 ಸಿಬ್ಬಂದಿಗಳನ್ನು ಮೀಸಲು ಸಿಬ್ಬಂದಿಯಾಗಿ ನಿಯೋಜನೆ ಮಾಡಲಾಗಿದೆ.

ನೆಲಮಂಗಲ ತಾಲ್ಲೂಕಿನ 20 ಗ್ರಾಮ ಪಂಚಾಯಿತಿಗಳ ಒಟ್ಟು 164 ಕ್ಷೇತ್ರಗಳ 320 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂತಿಮವಾಗಿ 990 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 185 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, 53732 ಪುರುಷ ಮತದಾರರು, 53507 ಮಹಿಳಾ ಮತದಾರರು ಹಾಗೂ 24 ಇತರೆ ಮತದಾರರು ಸೇರಿದಂತೆ ಒಟ್ಟು 107263 ಮತದಾರರಿದ್ದಾರೆ. 

ನೆಲಮಂಗಲ ತಾಲ್ಲೂಕಿನ 185 ಮತಗಟ್ಟೆಗಳಿಗೆ 185 ಪಿ.ಆರ್.ಓ., 185 ಎ.ಪಿ.ಆರ್.ಓ., 370 ಪಿ.ಓ.ಗಳು, ಸೇರಿದಂತೆ 740 ಮತಗಟ್ಟೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಶೇ. 10% ರಷ್ಟು ಅಂದರೆ 74 ಸಿಬ್ಬಂದಿಗಳನ್ನು ಮೀಸಲು ಸಿಬ್ಬಂದಿಯಾಗಿ ನಿಯೋಜನೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]