ರಾತ್ರಿ ಕರ್ಫ್ಯೂ ಇಂದಿನಿಂದಲ್ಲ ನಾಳೆಯಿಂದ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಟ್ವಿಟ್ ಮೂಲಕ ಈ ಸ್ಪಷ್ಟಣೆ ನೀಡಿರುವ ಅವರು, ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದಿದ್ದಾರೆ.

ಇದಕ್ಕು‌ ಮುನ್ನ ಬೆಳಗ್ಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾತ್ರಿ 10ಗಂಟೆಯಿಂದ ಬೆಳಗ್ಗೆ 6ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದರು.

ಕೋವಿಡ್ ಸಾಂಕ್ರಾಮಿಕವನ್ನು‌ ಪರಿಣಾಮಕಾರಿಯಾಗಿ ತಡೆಗಟ್ಟುವ‌ ಸಂಬಂಧ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಅವರು. ಈ ಮೂಲಕ ಹೊಸ ಸ್ವರೂಪದ ಕೊರೋನಾ ವೈರಸ್ ಹರಡುವಿಕೆ ನಿಯಂತ್ರಿಸಲು ಕರ್ಫ್ಯೂ ಜಾರಿ ಮಾಡಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ಬೆಂಗಳೂರಷ್ಟೇ ಅಲ್ಲ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.

ರಾತ್ರಿ 10 ಗಂಟೆಯ ನಂತರ ಜನರು ಮನೆಯಿಂದ ಹೊರಗೆ ಬರುವಂತಿಲ್ಲ. ಅಂಗಡಿ ಮುಂಗಟ್ಟುಗಳು ಬಾಗಿಲು ಬಂದ್ ಮಾಡಬೇಕು. ಅಂತರರಾಜ್ಯ ಜನ ಸಂಚಾರವನ್ನೂ ನಿಷೇಧಿಸಲಾಗಿದೆ. ಆದರೆ, ರಾತ್ರಿಯ ಹೊತ್ತು ಔಷಧ ಅಂಗಡಿ, ಆಸ್ಪತ್ರೆ ಇತ್ಯಾದಿ ಅಗತ್ಯ ಸೇವೆಗಳಿಗೆ ಅವಕಾಶ ಇರುತ್ತದೆ.

ಜನವರಿ 1ರಂದು ಶಾಲೆಗಳನ್ನ ಪುನಾರಂಭಿಸುವ ಸರ್ಕಾರದ ನಿರ್ಧಾರವನ್ನು ಈ ವೇಳೆ ಪರಿಷ್ಕರಿಸಲಾಗಿಲ್ಲ. ಇನ್ನೆರಡು ಮೂರು ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುವುದು. ಸದ್ಯಕ್ಕೆ ಶಾಲೆಗಳನ್ನ ಆರಂಭಿಸುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ 

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]