ದೊಡ್ಡಬಳ್ಳಾಪುರ: ಕೋವಿಡ್-19 ಆತಂಕದ ನಡುವೆ ಶಾಲೆಯನ್ನು ಪುನರಾರಂಭಿಸುವ ಸರ್ಕಾರದ ಆದೇಶದ ಕುರಿತು ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ಪೂರ್ವ ಸಿದ್ಧತಾ ಸಭೆ ನಡೆಸಿದರು.
ನಗರದ ಕೊಂಗಾಡಿಯಪ್ಪ ಬಿಎಡ್ ಕಾಲೇಜ್ ಆವರಣದಲ್ಲಿ ವಿದ್ಯಾಗಮ – 2 (1to9th) ಮತ್ತು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಶಾಲೆಗಳ ಆರಂಭದ ಕುರಿತು ಸಭೆ ನಡೆಸಲಾಯಿತು. ಈ ವೇಳೆ ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ತೆಗೆದುಕೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕೆಗಳನ್ನು ಎಸ್ ಒಪಿ( SOP) ಬಗ್ಗೆ ಮುಖ್ಯ ಶಿಕ್ಷಕರಿಗೆ ತರಬೇತಿಯನ್ನು ನೀಡಲಾಯಿತು.
ಈ ವೇಳೆ ಉಪನಿರ್ದೇಶಕ ಗಂಗಮಾರೇಗೌಡ,ಇಸಿಒಗಳು ಮತ್ತು ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

