ತುಮಕೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಪೊಲೀಸರು ಸಮವಸ್ತ್ರದಲ್ಲೇ ಮದ್ಯ ಸೇವಿಸುವಂತ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದಾಗಿ ಇಂತಹ ನಡತೆ ತೋರಿದಂತ ಚಿಕ್ಕನಾಯಕನಹಳ್ಳಿ ಠಾಣೆಯ ಎಎಸ್ಐ ಶ್ರೀನಿವಾಸ್, ತುರುವೇಕೆರೆ ತಾಲೂಕು ದಂಡಿನಶಿವರ ಠಾಣೆಯ ಕಾನ್ಸ್ ಟೇಬಲ್ ಪರಮೇಶ್ ಹಾಗೂ ಸಂತೋಷ್ ಎಂಬುವರನ್ನು ಅಮಾನತುಗೊಳಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಸಮವಸ್ತ್ರದಲ್ಲೇ ಮದ್ಯ ಸೇವಿಸುತ್ತಿರುವಂತ ಪೊಲೀಸರ ವೀಡಿಯೋ ಒಂದು ತುಮಕೂರು ವ್ಯಾಪ್ತಿಯಲ್ಲಿ ವೈರಲ್ ಆಗಿತ್ತು. ಈ ಸಂಬಂಧ ತನಿಖೆ ನಡೆಸಿದಂತ ಜಿಲ್ಲಾಡಳಿತವು, ಮೂವರು ಪೊಲೀಸರನ್ನು ಪ್ರಕರಣದಲ್ಲಿ ಅಮಾನತುಗೊಳಿಸಲಾಗಿದೆ.
ಇದರಿಂದಾಗಿ ಪೊಲೀಸರು ಹಾಗೂ ರಘು ನಡುವೆ ಮಾತಿನ ಚಕಮಕಿ ಕೂಡ ನಡೆದಿತ್ತು. ಈ ಬಳಿಕ ರಘು ಜಾಣಗೆರೆ ಅವರು ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ, ಪೊಲೀಸರ ನಡೆಯನ್ನು ಖಂಡಿಸಿದ್ದರು. ಇದಾದ ಬಳಿಕ ರಘು ಅವರನ್ನು ಕುಣಿಗಲ್ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿತ್ತು. ವಿಷಯ ತಿಳಿದು ಕುಣಿಗಲ್ ಪೊಲೀಸ್ ಠಾಣೆಗೆ ಆಗಮಿಸಿದಂತ ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ, ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ಸಂದರ್ಭದಲ್ಲೂ ಪೊಲೀಸರು, ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು.
ಕುಣಿಗಲ್ ತಾಲೂಕಿನ ಗ್ರಾಮ ಪಂಚಾಯ್ತಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳಿಸಲಾಗಿತ್ತು. ಚುನಾವಣಾ ಕರ್ತವ್ಯ ಮುಗಿಸಿ, ಮನೆಗೆ ತೆರಳುತ್ತಿದ್ದಂತ ವೇಳೆಯಲ್ಲಿ, ಹೊಯ್ಸಳ ವಾಹನದಲ್ಲೇ ಕುಳಿತು ಸಮವಸ್ತ್ರದಲ್ಲೇ ಮದ್ಯ ಸೇವಿಸಿದ್ದರು. ಇದನ್ನು ಗಮನಿಸಿದಂತ ಕರ್ನಾಟಕ ರಾಷ್ಟ್ರ ಸಮಿತಿ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ಪ್ರಶ್ನಿಸಿದ್ದರು.
ಈ ಎಲ್ಲಾ ಘಟನೆ ಬಳಿಕ, ಕರ್ನಾಟಕ ರಾಷ್ಟ್ರ ಸಮಿತಿ ಸದಸ್ಯರು, ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವೀಡಿಯೋ ದಾಖಲೆ ಸಮೇತ ದೂರು ನೀಡಿದ್ದರು. ಇಂತಹ ದೂರನ್ನು ಆದರಿಸಿ, ತನಿಖೆ ನಡೆಸಿದಂತ ಎಸ್ ಪಿ ಡಾ.ಕೆ.ವಂಶಿಕೃಷ್ಣ ಇದೀಗ ಸಮವಸ್ತ್ರದಲ್ಲೇ ಮದ್ಯಸೇವಿಸಿದಂತ ಮೂವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

