ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮದಿನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶುಭಾಶಯಗಳನ್ನು ಕೋರಿದ್ದಾರೆ.
ಅಟಲ್ ಅವರನ್ನು ಸ್ಮರಿಸಿ ಫೇಸ್ಬುಕ್ ನಲ್ಲಿ ಅವರೊಂದಿಗಿನ ಪೋಟೋ ಪೋಸ್ಟ್ ಮಾಡಿ ಶುಭಾಶಯಗಳನ್ನು ಕೋರಿರುವ ಅವರು. ಮಾಜಿ ಪ್ರಧಾನಮಂತ್ರಿಗಳು, ದೇಶ ಕಂಡ ಅಪರೂಪದ ರಾಜಕಾರಣಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಗೌರವಪೂರ್ವಕ ಪ್ರಣಾಮಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಅಟಲ್ ಅವರ ಜನ್ಮದಿನಕ್ಕೆ ಪ್ರಧಾನಿ ಮೋದಿಯಾದಿಯಾಗಿ ಗಣ್ಯರು ಶುಭಾಶಯಗಳನ್ನು ಕೋರುತ್ತಾ ಅವರ ಸ್ಮರಣೆ ಮಾಡುತ್ತಿದ್ದಾರೆ.
ಅಜಾತಾಶತ್ರುವೆಂದು ಹೆಸರಾಗಿದ್ದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಕ್ಕೆ ಅವರ ಅಭಿಮಾನಿಗಳು ಶುಭಕೋರಿರುವ ಸಂದೇಶಗಳು ಸಾಮಾಜಿಕ ಜಾಲತಾಣವನ್ನು ತುಂಬಿ ಹೋಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

