ಯುವ ಸಮುದಾಯ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತಾಗಲಿ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್‍ನಾಯಕ್

ದೊಡ್ಡಬಳ್ಳಾಪುರ: ಸರ್ವ ಧರ್ಮ ಸಮನ್ವಯತೆ ಮೂಲಕ ಸಮಾಜಮುಖಿ ಕಾರ್ಯಗಳನ್ನು ಮಾಡಬೇಕಾಗಿದೆ. ಯುವ ಸಮುದಾಯವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಬೇಕಾಗಿರುವುದು ಇಂದಿನ ಅಗತ್ಯವಾಗಿದೆ ಎಂದು  ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್‍ನಾಯಕ್ ತಿಳಿಸಿದರು. 

ತಾಲೂಕಿನ ಕಾಡನೂರು ಗ್ರಾಮದ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ನಡೆದ ಭಜನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಸಮುದಾಯದ ಭಾಗಿತ್ವದಲ್ಲಿ ಗ್ರಾಮೀಣ ಅಭಿವೃದ್ದಿಯನ್ನು  ಸಮರ್ಪಕವಾಗಿ ಮಾಡಬಹುದಾಗಿದೆ. ನಮ್ಮ ಹಿರಿಯರು  ಗ್ರಾಮಗಳ ಅಭಿವೃದ್ದಿಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಪಕ್ಷ, ಜಾತಿ, ಧರ್ಮವನ್ನು ಮೀರಿ ಜನರು ನಮ್ಮೂರಿನ ಕೆಲಸ,  ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕಾಗಿದೆ.  ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯನ್ನು ಗ್ರಾಮಗಳಿಗೆ ಸಮರ್ಪಕವಾಗಿ ತಲುಪಿಸಲಾಗುತ್ತಿದೆ. ಗ್ರಾಮಸ್ಥರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿದೆ ಎಂದರು.

ಗ್ರಾಮಗಳಿಗೆ ಮತ್ತು ರೈತರಿಗೆ ಅನುಕೂಲವಾಗುವ ಕೆರೆಗಳ ಅಭಿವೃದ್ದಿ, ಶುದ್ದ ಕುಡಿಯುವ ನೀರಿನ ಘಟಕಗಳು, ಸ್ವಾವಲಂಬಿ ಉದ್ಯೋಗಿಯಾಗಲು ಅರ್ಥಿಕ ನೆರವು.  ಸ್ವಸಹಾಯ ಸಂಘಗಳ ಮೂಲಕ ಜನೋಪಯೋಗಿ ಕಾರ್ಯಕ್ರಮಗಳು ಮತ್ತು ಅಭಿವೃದ್ದಿ ಯೋಜನೆಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ವತಿಯಿಂದ ನಡೆಯುತ್ತಿದೆ. ಕೋವಿಡ್ ಆತಂಕದ ನಡುವೆಯೂ ಗ್ರಾಮಾಭಿವೃದ್ದಿ‌ಯೋಜನೆಯನ್ನು  ಜನರಿಗೆ ತಲುಪಿಸಲಾಗುತ್ತದೆ. ಜನರು ಸ್ವಾವಲಂಬಿಗಳಾಗಿ ಜೀವನ ನಡೆದಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು  ಗ್ರಾಮೀಣ ಜನರಿಗೆ ನೀಡಲಾಗುತ್ತಿದೆ ಎಂದರು. 

ಚನ್ನಕೇಶವಸ್ವಾಮಿ ದೇವಾಲಯದ ಅಧ್ಯಕ್ಷರಾದ  ಗೋಪಾಲಯ್ಯ ಮಾತನಾಡಿ, ದೊಡ್ಡಬಳ್ಳಾಪುರ ತಾಲೂಕಿನ ಹಲವಾರು ಐತಿಹಾಸಿಕ ದೇವಾಲಯಗಳನ್ನು ಧರ್ಮಸ್ಥಳ ದೇವಾಲಯ ಜೀರ್ಣೋದ್ದಾರ ಯೋಜನೆಯಲ್ಲಿ ಅಭಿವೃದ್ದಿಗೊಳಿಸಲಾಗಿದೆ. ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸಹಕಾರಿಯಾಗಿದೆ. ಸ್ವಹಾಯ  ಸಂಘಗಳ ಕಾರ್ಯವೈಖರಿ ಮತ್ತು ಗ್ರಾಮಾಭಿವೃದ್ದಿ ಯೋಜನೆಗಳಿಂದ  ರಾಜ್ಯದ ಹಲವೆಡೆ ಅಭಿವೃದ್ದಿ ಕಾರ್ಯಗಳು ನಡೆದಿವೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಗಳಿಂದ ರೈತರು ಮತ್ತು ಗ್ರಾಮಗಳ ಅಭಿವೃದ್ದಿ ಕಂಡಿವೆ ಎಂದರು. 

ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲೂಕು ನಿರ್ದೇಶಕಿ ಸುಧಾ ಭಾಸ್ಕರ್ ನಾಯಕ್, ಮಧುರೆ ಹೋಬಳಿ ಮೇಲ್ವಿಚಾರಕರಾದ ಎಸ್.ಎಂ.ಪ್ರಕಾಶ್, ಚನ್ನಕೇಶವಸ್ವಾಮಿ ದೇವಾಲಯ ಸಮಿತಿ ಮಾಜಿ ಅಧ್ಯಕ್ಷ ವೆಂಕಟೇಗೌಡ, ಮಾಜಿ ಕಾರ್ಯದರ್ಶಿ ಕೆ.ಜಿ.ನಾರಾಯಣಗೌಡ, ಮಾಜಿ ಖಜಾಂಚಿ ಕೆ.ಸಿ.ನಾರಾಯಣಸ್ವಾಮಿ, ನಿವೃತ್ತ ಮುಖ್ಯ ಶಿಕ್ಷಕ ವೀರೇಗೌಡ, ಗ್ರಾಮದ ಮುಖಂಡರುಗಳಾದ ಸಿ.ಎ.ರಮೇಶ್, ಎಸ್.ಕೋದಂಡಮೂರ್ತಿ, ಎಂ.ಸಿ.ಕೆ.ಮೂರ್ತಿ ಮತ್ತು ವಿವಿಧ ಗ್ರಾಮಗಳ ಭಕ್ತರು ಭಾಗವಹಿಸಿದ್ದರು.

ವೈಕುಂಠ ಏಕಾದಶಿ ಅಂಗವಾಗಿ ಚನ್ನಕೇಶವ ದೇವಾಲಯದಲ್ಲಿ ವಿಶೇಷ ಅಲಂಕಾರ ಮತ್ತು ಪೂಜಾ ಕಾರ್ಯಕ್ರಮಗಳು ನಡೆದವು. ಭಜನಾ ಕಾರ್ಯಕ್ರಮದಲ್ಲಿ ಕಾಡನೂರು ಅವ್ಯಕ್ತಾಶ್ರಮದ ಕೆಂಪೇಗೌಡ, ಬೆಂಗಳೂರಿನ ಸದ್ಗುರು ಭಜನಾ ಮಂಡಲಿ, ಶನೈಶ್ವರಸ್ವಾಮಿ ಭಜನಾ ಮಂಡಲಿ,  ಜೈ ಮಾರುತಿ ಭಜನಾ ಮಂಡಲಿ ಮತ್ತು ಕಾಡನೂರು ಚನ್ನಕೇಶವಸ್ವಾಮಿ ಭಜನಾ ಮಂಡಲಿಯ ಕಲಾವಿದವರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]