ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಶಿವಗಂಗೆಯ ಹೊನ್ನಮ್ಮಗವಿ ಮಠದಲ್ಲಿರುವ ಶ್ರೀ ಶಿವಗಂಗಾ ಪದವಿ ಪೂರ್ವ ಕಾಲೇಜಿನಲ್ಲಿಂದು ನಡೆದ “ಯುವಸೌರಭ-2020” ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯಕ್ರಮವನ್ನು ಸಾಹಿತಿ ಹಾಗೂ ವೈಜ್ಞಾನಿಕ ಚಿಂತಕ ಡಾ.ಹುಲಿಕಲ್ ನಟರಾಜ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಿವಗಂಗೆ ಕ್ಷೇತ್ರದ ಹೊನ್ನಮ್ಮಗವಿ ಮಠದ ಪೀಠಾಧ್ಯಕ್ಷರಾದ ಶ್ರೀ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಿ.ಮಾ.ಸುಧಾಕರ್, ಶಿವಗಂಗೆಯ ಕಾರ್ಯ ನಿರ್ವಾಹಕ ಅಧಿಕಾರಿ ರಮ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕ ಬಿ. ಮಂಜುನಾಥ ಆರಾಧ್ಯ ಸೇರಿದಂತೆ ಶಿವಗಂಗಾ ಪದವಿ ಪೂರ್ವ ಕಾಲೇಜಿನ, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

