ದೊಡ್ಡಬಳ್ಳಾಪುರ: ಎರಡನೇ ಹಂತದಲ್ಲಿ ನಡೆಯುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ಗ್ರಾಪಂ ಚುನಾವಣೆಯಲ್ಲಿ ಮಧ್ಯಾಹ್ನ 1ಗಂಟೆಯ ವರದಿಯನ್ವಯ ಶೇ.44.34ರಷ್ಟು ಮತದಾನ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಶೇ.42.64, ದೇವನಹಳ್ಳಿಯಲ್ಲಿ ಶೇ.46.05ರಷ್ಟು ಮತದಾನ ನಡೆದಿದೆ.
ಶಾಂತಯುತ ಮತದಾನ: ತಾಲೂಕಿನಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲವೆಂದು ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್ ಹರಿತಲೇಖನಿಗೆ ತಿಳಿಸಿದ್ದಾರೆ.
ಮತದಾನ ಪ್ರಕ್ರಿಯೆಯಲ್ಲಿ ಆರಂಭಿಕ ಹಂತಗಳಿಂದ ದೇವನಹಳ್ಳಿ ತಾಲೂಕಿನಲ್ಲಿ ಹೆಚ್ಚಾಗಿ ಮತದಾನ ನಡೆಯುತ್ತಿದ್ದು, ದೊಡ್ಡಬಳ್ಳಾಪುರ ತಾಲೂಕು ಅಲ್ಪ ಪ್ರಮಾಣದಲ್ಲಿ ಹಿಂದುಳಿದಿದೆ.
ಅನೇಕ ಮತಗಟ್ಟೆಗಳಲ್ಲಿ ಮತದಾರರು ಸರದಿ ಸಾಲಿನಲ್ಲಿ ನಿಂತು ಮತಚಲಾಯಿಸುತ್ತಿದ್ದರೆ, ಕೆಲ ಮತಗಟ್ಟೆಗಳಲ್ಲಿ ಜನಸಂದಣಿ ಇಲ್ಲದೆ ಸುಲಲಿತವಾಗಿ ಮತದಾನ ನಡೆಯುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

