ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ 2020ರ ಡಿಸೆಂಬರ್ 30ರಂದು ನಡೆಯಲಿರುವ ಹಿನ್ನೆಲೆ 2020ರ ಡಿಸೆಂಬರ್ 29ರ ಮಧ್ಯರಾತ್ರಿಯಿಂದ ಡಿಸೆಂಬರ್ 30ರ ಮಧ್ಯರಾತ್ರಿಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಮುಚ್ಚಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಆದೇಶಿಸಿದ್ದಾರೆ.
ಶಾಂತ ಮತ್ತು ಮುಕ್ತವಾಗಿ ಮತ ಎಣಿಕೆ ಕಾರ್ಯ ನಡೆಯಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಕರ್ನಾಟಕ ಅಬಕಾರಿ ಸನ್ನದುಗಳು(ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ-10(ಬಿ)ರನ್ವಯ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ) ಅಧಿನಿಯಮ 2020ರ ಪ್ರಕರಣ 3078ಎಸಿ(ಸಿ) ರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಚಿಲ್ಲರೆ ಮದ್ಯದ ಅಂಗಡಿಗಳು, ಬಾರ್ ಅಂಡ್ ರೆಸ್ಟೋರೆಂಟ್‌ಗಳು, ಸಗಟು ಮದ್ಯದ ಅಂಗಡಿಗಳು, ಕ್ಲಬ್‌ಗಳು, ಬೋರ್ಡಿಂಗ್ ಮತ್ತು ಲಾಡ್ಜಿಂಗ್‌ಗಳು, ಪಬ್‌ಗಳು, ವೈನ್ ಟ್ಯಾವರಿನ್‌ಗಳು, ವೈನ್ ಬೋಟಿಕ್‌ಗಳು ಇತ್ಯಾದಿಗಳನ್ನು ಮುಚ್ಚಲು ಆದೇಶಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಒಣದಿನ ಎಂದು ಘೋಷಿಸಿದ್ದಾರೆ. ( ಸಾಂದರ್ಭಿಕ ಚಿತ್ರ ಬಳಸಲಾಗಿದೆ )
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

