ಬ್ಲಾಕ್ ಪಲ್ಸರ್ ನಲ್ಲಿ ಬಂದು ಸರಗಳ್ಳತನ ಮಾಡುತ್ತಿದ್ದವರ ಬಂಧಿಸಿದ ದೊಡ್ಡಬಳ್ಳಾಪುರ ಪೊಲೀಸರು / 26 ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಅಣ್ತಮ್ಮರ ಸೆರೆ

ದೊಡ್ಡಬಳ್ಳಾಪುರ: ಕಪ್ಪು ಬಣ್ಣದ ಪಲ್ಸರ್ ನಲ್ಲಿ  ಬಂದು ಗ್ರಾಮೀಣ ಪ್ರದೇಶದ ಒಂಟಿ ಮಹಿಳೆಯರ ಟಾರ್ಗೆಟ್ ಮಾಡಿ, ಅವರ ಮೇಲೆ ಹಲ್ಲೆ ನಡೆಸಿ ಆವರ ಕೊರಳಲ್ಲಿದ್ದ ಚಿನ್ನದ ಸರ ಕಿತ್ಕೊಂಡ್ ಪರಾರಿಯಾಗುತ್ತಿದ್ದ ಖತರ್ನಾಕ್  ಸಹೋದರರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ನಗದಲ್ಲಿ ನಡೆದ ಪತ್ರಿಕಾಗೋಷ್ಠಿ ಮಾಹಿತಿ ನೀಡಿದ ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ತಾಲೂಕಿನ ಬಂಡಯ್ಯನಪಾಳ್ಯ ಗ್ರಾಮದ ನಿವಾಸಿ ಮುತ್ತಮ್ಮ ತಮ್ಮ ಜಮೀನಿಗೆ ಹಸುಗಳನ್ನು ಹೊಡೆದುಕೊಂಡು ಹೋಗ್ತಿದ್ದ ಸಂದರ್ಭ ಪಲ್ಸರ್ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಆಕೆಗೆ ಮಾರಕಾಸ್ತ್ರದಿಂದ ಹೊಡೆದು ಕೊರಳಲ್ಲಿದ್ದ ಸರ ಕಿತ್ತು ಪರಾರಿಯಾಗಿದ್ದರು. ಈ ಕುರಿತು ದೊಡ್ಡಬೆಳವಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಗಣೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಟಿ.ರಂಗಪ್ಪ ನೇತೃತ್ವದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಗಜೇಂದ್ರ, ಬೇಬಿ ವಾಲೇಕರ್, ಶಂಕರಪ್ಪ, ಸೋಮಶೇಖರ್, ಮಂಜುನಾಥ್ ಹಾಗೂ ಸಿಬ್ಬಂದಿಗಳ ಕಾರ್ಯಾಚರಣೆ ನಡೆಸಿ ಆರೋಪಿಗಳ ಬಂಧಿಸಿದ್ದಾರೆ.

ಒಂಟಿ ಮಹಿಳೆಯರನ್ನೇ ಟಾರ್ಗೆಟ್​ ಮಾಡಿಕೊಂಡು ಹಲ್ಲೆ ನಡೆಸಿ ಕಳ್ಳತನ ಮಾಡುತ್ತಿದ್ದುದರಿಂದ ಗ್ರಾಮೀಣ ಪ್ರದೇಶಗಳಾದ ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರಿನ ಗ್ರಾಮಗಳಲ್ಲಿ ಮಹಿಳೆಯರು ಒಬ್ಬಂಟಿಯಾಗಿ ತಿರುಗಾಡಲು ಭಯ ಪಡುತ್ತಿದ್ದರು.

ನೆಲಮಂಗಲ ಮಾರುತಿ ನಗರದ ನಿವಾಸಿಗಳಾದ ಅಶೋಕ್​ ಸಿ. ಮತ್ತು ವಿನೋದ್ ಅಣ್ಣ- ತಮ್ಮಂದಿರಾಗಿದ್ದು, ಹೇರ್​ ಕಟಿಂಗ್​ ಕೆಲಸ ಬಿಟ್ಟು ಸರಗಳ್ಳತನದ ಕಾರ್ಯಕ್ಕೆ ಇಳಿದಿದ್ದರು.

ಬಂಧಿತರು 26 ಸರ ಕಳ್ಳತನ ಪ್ರಕರಣದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಅಲ್ಲದೆ ಎರಡು ಪಲ್ಸರ್​ ಬೈಕ್​ಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ. 26 ಪ್ರಕರಣಗಳಿಗೆ ಸಂಬಂಧಿಸಿದಂತೆ 25 ಲಕ್ಷ ಮೌಲ್ಯದ 510 ಗ್ರಾಂ ತೂಕದ 23 ಚಿನ್ನದ ಸರಗಳು, ಕೃತ್ಯಕ್ಕೆ ಬಳಸಿದ್ದ ಪಲ್ಸರ್​ ಬೈಕ್​, ಚಾಕು ಸ್ಪಾನರ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]