ದೊಡ್ಡಬಳ್ಳಾಪುರ: ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸದಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಲೇ ಇದೆ. ಕಳವು ಸೇರಿದಂತೆ ಇತರೆ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಹೇಳಿದರು.
ಅವರು ನಗರದ ಕೆ.ಎಂ.ಎಚ್.ಕಲ್ಯಾಣ ಮಂದಿರದಲ್ಲಿ ನಡೆದೆ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚಿನ್ನಾಭರಣ ಸೇರಿದಂತೆ ಇತರೆ ವಸ್ತುಗಳು ನಮ್ಮವೇ ಎಂದು ಗುರುತಿಸುವ ಮಾಲೀಕರು ಅವುಗಳನ್ನು ಕಳವು ಮಾಡಿರುವವನ್ನು ಗುರುತಿಸುವಲ್ಲಿ ಹಾಗೂ ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳಿವಲ್ಲಿ ಹಿಂದೆಸರಿಯುತ್ತಾರೆ. ಇದರಿಂದ ಪೊಲೀಸರು ಕಷ್ಟಪಟ್ಟು ಕಳ್ಳರನ್ನು ಬಂಧಿಸಿಯುವ ಸಹ ಆರೋಪಿಗಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅವಕಾಶವಾಗುತ್ತದೆ. ಇದರಿಂದಲು ಕಳವು ಪ್ರಕರಣಗಳು ನಡೆಯಲು ಕಾರಣವಾಗುತ್ತದೆ. ಸಾರ್ವಜನಿಕರು ಧೈರ್ಯವಾಗಿ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷಿಗಳನ್ನು ಹೇಳುವ ಮೂಲಕವು ಅಪರಾಧಗಳು ಕಡಿಮೆಯಾಗಲು ಸಹಕರಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಮಾತನಾಡಿ, ರಾಮರಾಜ್ಯ ಎನ್ನುವುದು ಒಂದು ಆದರ್ಶ. ಇದು ಸಾಕಾರವಾಗಲು ಎಲ್ಲರ ಸಹಕಾರ ಇದ್ದಾಗ ಮಾತ್ರ ಸಾಧ್ಯವಾಗಲಿದೆ. ಜನರಲ್ಲಿ ಜಾಗೃತಿ ಇಲ್ಲದೆ ಯಾವ ಕಾನೂನು ಸಹ ಫಲಕಾರಿಯಾಗಲು ಸಾಧ್ಯವಿಲ್ಲ. ರಾಜ್ಯದಲ್ಲಿಯೇ ಅತಿ ಹೆಚ್ಚು ರಸ್ತೆ ಅಪಘಾತಗಳು ನಡೆಯುವ ಪಟ್ಟಿಲ್ಲಿ ಗ್ರಾಮಾಂತರ ಜಿಲ್ಲೆಯು ಒಂದಾಗಿದೆ. ಹೀಗಾಗಿ ಪೋಷಕರು ಮಕ್ಕಳಿಗೆ ರಸ್ತೆ ನಿಯಮಗಳನ್ನು ಪಾಲಿಸುವಂತೆ ತಿಳಿಹೇಳಬೇಕು ಎಂದರು.
ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯನ್ನು ತಾಲ್ಲೂಕಿಗೆ ವರ್ಗಾಯಿಸಬೇಕು. ಕಚೇರಿ ನಿರ್ಮಾಣಕ್ಕೆ ಈಗಾಗಕೇ ಭೂಮಿ ನೀಡಲಾಗಿದೆ. ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ದೊಡ್ಡದಾಗಿ ಬೆಳೆದಿರುವ ಹಿನ್ನೆಲೆಯಲ್ಲಿ ಇಲ್ಲಿಗೆ ಪ್ರತ್ಯೇಕವಾಗಿ ಪೊಲೀಸ್ ಠಾಣೆ ಮಂಜೂರಾತಿ ಹಾಗೂ ಸಂಚಾರಿ ಪೊಲೀಸ್ ಠಾಣೆಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.
ಸಭೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಕೆ.ಎಂ.ಹನುಮಂತರಾಯಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಗಣೇಶ್, ಡಿವೈಎಸ್ಪಿ ಟಿ.ರಂಗಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಡಾ.ಮಲ್ಲಿಕಾರ್ಜನ ಸೇರಿದಂತೆ ಉಪವಿಭಾಗದ ಎಲ್ಲಾ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳು ಹಾಜರಿದ್ದರು.
ಇದೇ ಸಂದರ್ಭದಲ್ಲಿ ವಿವಿಧ 45 ಪ್ರಕರಣಗಳಲ್ಲಿ ಸರಗಳನ್ನು ಕಳವು ಮಾಡಿದ್ದ ಅರ್ಧ ಕೆಜಿಯಷ್ಟು ಸರಗಳನ್ನು ಮಹಿಳೆಯರಿಗೆ ನೀಡಲಾಯಿತು. ಹಾಗೆಯೇ ವಿವಿಧ ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ಶ್ರಮಿಸಿದ ಪೊಲೀಸ್ ಸಿಬ್ಬಂದಿಗೆ ಪ್ರಶಂಸ ಪತ್ರ,ಪಲಕಗಳನ್ನು ನೀಡಿ ಗೌರವಿಸಲಾಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

