ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯವು ಇಂದು ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ನಡೆಯಲಿದ್ದು, ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಂಗಾಡಿಯಪ್ಪ ಕಾಲೇಜು, ಹೊಸಕೋಟೆ ತಾಲ್ಲೂಕಿನ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು, ನೆಲಮಂಗಲ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಹಾಗೂ ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ 08:00 ಗಂಟೆಗೆ ಆರಂಭವಾಗಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 241 ಟೇಬಲ್ಗಳಲ್ಲಿ ಮತ ಎಣಿಕೆ ನಡೆಯಲಿದ್ದು, 723 ಮತ ಎಣಿಕೆ ಸಿಬ್ಬಂದಿಗಳು ಹಾಗೂ 63 ಮೀಸಲು ಸೇರಿದಂತೆ, ಒಟ್ಟು 786 ಮತ ಎಣಿಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಂಗಾಡಿಯಪ್ಪ ಕಾಲೇಜಿನಲ್ಲಿ ತೆರೆಯಲಾಗಿರುವ ಮತ ಎಣಿಕೆ ಕೇಂದ್ರದಲ್ಲಿ, 74 ಟೇಬಲ್ಗಳಲ್ಲಿ ಮತ ಎಣಿಕೆ ನಡೆಯಲಿದ್ದು, 222 ಮತ ಎಣಿಕೆ ಸಿಬ್ಬಂದಿಗಳು ಹಾಗೂ 24 ಮೀಸಲು ಸೇರಿದಂತೆ ಒಟ್ಟು 246 ಮತ ಎಣಿಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಹಾಗೂ ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತೆರೆಯಲಾಗಿರುವ ಮತ ಎಣಿಕೆ ಕೇಂದ್ರದಲ್ಲಿ, 48 ಟೇಬಲ್ಗಳಲ್ಲಿ ಮತ ಎಣಿಕೆ ನಡೆಯಲಿದ್ದು, 144 ಮತ ಎಣಿಕೆ ಸಿಬ್ಬಂದಿಗಳು ಹಾಗೂ 15 ಮೀಸಲು ಸೇರಿದಂತೆ ಒಟ್ಟು 159 ಮತ ಎಣಿಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಹೊಸಕೋಟೆ ತಾಲ್ಲೂಕಿನ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ತೆರೆಯಲಾಗಿರುವ ಮತ ಎಣಿಕಾ ಕೇಂದ್ರದಲ್ಲಿ, 71 ಟೇಬಲ್ಗಳಲ್ಲಿ ಮತ ಎಣಿಕೆ ನಡೆಯಲಿದ್ದು, 213 ಮತ ಎಣಿಕೆ ಸಿಬ್ಬಂದಿಗಳು ಹಾಗೂ 21 ಮೀಸಲು ಸೇರಿದಂತೆ ಒಟ್ಟು 234 ಮತ ಎಣಿಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಹಾಗೂ ನೆಲಮಂಗಲ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜನಲ್ಲಿ ತೆರೆಯಲಾಗಿರುವ ಮತ ಎಣಿಕೆ ಕೇಂದ್ರದಲ್ಲಿ 48 ಮತ ಎಣಿಕೆ ನಡೆಯಲಿದ್ದು, 144 ಮತ ಎಣಿಕೆ ಸಿಬ್ಬಂದಿಗಳು ಹಾಗೂ 03 ಮೀಸಲು ಸೇರಿದಂತೆ ಒಟ್ಟು 147 ಮತ ಎಣಿಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಹಳ್ಳಿ ಫೈಟ್ನ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಬೆಳಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ಆರಂಭ ಆಗಲಿದ್ದು, ರಾತ್ರಿ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

