ಬೆಂ.ಗ್ರಾ.ಜಿಲ್ಲೆ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಸಂಪೂರ್ಣ ಫಲಿತಾಂಶದ ವಿವರ ತಡವಾಗಿ ದೊರೆಯಲಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಚುನಾವಣೆ ನಡೆದ 427 ಕ್ಷೇತ್ರಗಳ ಪೈಕಿ 340 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು, 87 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.
ದೇವನಹಳ್ಳಿ ತಾಲ್ಲೂಕಿನಲ್ಲಿ ಚುನಾವಣೆ ನಡೆದ 305 ಕ್ಷೇತ್ರಗಳ ಪೈಕಿ 90 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು, 215 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.
ನೆಲಮಂಗಲ ತಾಲ್ಲೂಕಿನಲ್ಲಿ ಚುನಾವಣೆ ನಡೆದ 320 ಕ್ಷೇತ್ರಗಳ ಪೈಕಿ 314 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು, 6 ಕ್ಷೇತ್ರಗಳ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.
ಇನ್ನು ವಿಜೇತರಾದವರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

