ತುಮಕೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರಪತ್ರದ ಮೂಲಕ ರಾಜ್ಯಾದ್ಯಂತ ಕುತೂಹಕ್ಕೆ ಸೆಳೆದುದ್ದ ಜಿಲ್ಲೆಯ ಹೆಬ್ಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕೆರೆ ಹಾಗೂ ದೊಡ್ಡಗುಣಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್.ಗಂಗಮ್ಮ ಎರಡೂ ಕ್ಷೇತ್ರಗಳಲ್ಲಿ ಸೋಲನ್ನು ಅನುಭವಿಸಿದ್ದಾರೆ
ಚುನಾವಣೆಯಲ್ಲಿ ಗೆದ್ದರೆ ಮತ್ತು ಸೋತರೆ ಮಾಡುವ ಕೆಲಸಗಳ ಕುರಿತು ಅವರು ಕರಪತ್ರದಲ್ಲಿ ಮುದ್ರಿಸುವ ಮೂಲಕ ತೀವ್ರ ಕುತೂಹಲ ಹಾಗೂ ವಿರೋಧಕ್ಕೆ ಕಾರಣವಾಗಿದ್ದರು. ಗಂಗಮ್ಮರ ಪ್ರಣಾಳಿಕೆಯುಳ್ಳ ಕರಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸಹ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಅಕೆಯ ಪರ ವಿರೋಧದ ಚರ್ಚೆಯೂ ನಡೆದಿತ್ತು. ಅಲ್ಲದೆ ದೊಡ್ಡಬಳ್ಳಾಪುರದ ವಕೀಲ ಟಿ.ಕೆ.ಹನುಮಂತರಾಜು, ಗಂಗಮ್ಮ ಅವರು ಕರಪತ್ರ ಗ್ರಾಮದ ಮತದಾರರಲ್ಲಿ ಭಯ ಹುಟ್ಟಿಸಿ ಮತ ಪಡೆಯುವ ಉದ್ದೇಶ ಹೊಂದಿದೆ. ಇದು ಕಾನೂನು ಬಾಹಿರವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಯಿಂದಿಡಿದು, ತುಮಕೂರು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗೆ ಇ-ಮೇಲ್ ಮೂಲಕ ದೂರು ನೀಡಿದ್ದರು.
ಇಂದು ನಡೆದ ಮತ ಎಣಿಕೆಯಲ್ಲಿ ಗಂಗಮ್ಮ ಸೋಲುನ್ನು ಕಂಡಿದ್ದು, ಅವರ ಪ್ರಣಾಳಿಕೆಯಂತೆ ಮುಂದೆ ಯಾವ ಕ್ರಮಕೈಗೊಳ್ಳಲಿದ್ದಾರೆ ಕಾದು ನೋಡಬೇಕಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

