ಅಂಚೆ ಮತಪತ್ರದ ಗೊಂದಲದಿಂದ ದೊಡ್ಡಬಳ್ಳಾಪುರದಲ್ಲಿ ಶಿಕ್ಷಕನ ಮೇಲೆ ಹಲ್ಲೆ / ಪೊಲೀಸ್ ಠಾಣೆಗೆ ದೂರು

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಮತಗಳ ಎಣಿಕೆ ಮುಕ್ತಾಯವಾದ ಎರಡು ದಿನಗಳ ನಂತರ ಕೆಲ ಹಳ್ಳಿಗಳಲ್ಲಿ ಘರ್ಷಣೆಗಳು ನಡೆದಿದ್ದು, ಹಲ್ಲೆಗೆ ಒಳಗಾದವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಚುನಾವಣೆ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕರಿಗೆ ಅಂಚೆ ಮತಪತ್ರ (ಇಡಿಸಿ)ಗಳನ್ನು ಸರ್ಕಾರ ನೀಡುತ್ತದೆ. ಈ ಮತಗಳನ್ನು ಎಣಿಕೆ ಸಂದರ್ಭದಲ್ಲಿ ಎಲ್ಲರ ಸಮ್ಮುಖದಲ್ಲೇ ಪ್ರತ್ಯೇಕವಾಗಿ ಎಣಿಕೆ ಮಾಡಿ ಇಂತಹವರಿಗೆ ಮತ ಹಾಕಲಾಗಿದೆ ಎಂದು ತಿಳಿಸಲಾಗುತ್ತದೆ.

ಅಂಚೆ ಮತಪತ್ರ ಒಂದರಿಂದಲೇ ಗಂಟಿಗಾನಹಳ್ಳಿ ಗ್ರಾಮದಲ್ಲಿ ಅಭ್ಯರ್ಥಿಯೊಬ್ಬರು ಸೋಲು ಕಾಣುವಂತಾಗಿತ್ತು. ಇದೇ ರೀತಿ ಅಲಪನಹಳ್ಳಿ ಗ್ರಾಮದಲ್ಲಿ ಶಿಕ್ಷಕರಾಗಿರುವ ಹನುಮಂತರಾಯಪ್ಪ ಅವರು ‘ಅಂಚೆ ಮತಪತ್ರವನ್ನು ನಮ್ಮವರಿಗೆ ನೀಡಿಲ್ಲ’ ಎನ್ನುವ ಕಾರಣಕ್ಕೆ ಶಿಕ್ಷಕರ ಮೇಲೆ ಶಾಲೆ ಸಮೀಪವೇ ಹಲ್ಲೆ ನಡೆಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಹನುಮಂತರಾಯಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಅಂಚೆ ಮತಪತ್ರಕ್ಕಾಗಿ ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವುದನ್ನು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜೈಕುಮಾರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಪ್ರಭಾರ ಅಧ್ಯಕ್ಷ ಎಂ.ಎಸ್.ರಾಜಶೇಖರ್ ಖಂಡಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿ, ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವವರ ವಿರುದ್ದ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹಲ್ಲೆ ನಡೆಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಅಂಚೆ ಮತಪತ್ರಗಳನ್ನು ಇತರೆ ಮತ ಪತ್ರಗಳೊಂದಿಗೆ ಮಿಶ್ರಣ ಮಾಡಿ ಎಣಿಕೆ ಮಾಡಬೇಕು. ಇದರಿಂದ ಯಾವ ಅಭ್ಯರ್ಥಿಗೆ  ಅಂಚೆ ಮತ ಹಾಕಲಾಗಿದೆ ಎನ್ನುವುದು ತಿಳಿಯುವುದಿಲ್ಲ ಎಂದಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]