ನವದೆಹಲಿ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ವುಡ್ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರಿಗೆ ಲಘು ಹೃದಯಾಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಈ ಕುರಿತು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದು, ಸೌರವ್ ಗಂಗೂಲಿ ಅವರು ಲಘು ಹೃದಯ ಆಘಾತದಿಂದ ಬಳಲುತ್ತಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇಳಿದಾಗ ಬೇಸರವಾಗಿದೆ. ಶೀಘ್ರವಾಗಿ ಮತ್ತು ಪೂರ್ಣವಾಗಿ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ ಎಂದಿದ್ದಾರೆ. (ಸಂಗ್ರಹ ಫೋಟೋ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

