ಬೆಂಗಳೂರು: ಕೋವಿಡ್-19/ ಕೊರೋನಾ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ವಿಶ್ವಕರ್ಮ “ಅಮರಶಿಲ್ಪಿ ಜಕಣಾಚಾರಿ” ಅವರ ಸಂಸ್ಮರಣಾ ದಿನಾಚರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
“ಅಮರಶಿಲ್ಪಿ ಜಕಣಾಚಾರಿ” ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕ ರಾಜೀವಲೋಚನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಂಜುನಾಥ ಆರಾಧ್ಯ ಸೇರಿದಂತೆ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

