ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ 2020ರ ಡಿಸೆಂಬರ್ 29ರಂದು ದೇವನಹಳ್ಳಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ 2020-21ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿಜೇತರಾದವರ ಪಟ್ಟಿ ಇಂತಿದೆ.
ಭರತನಾಟ್ಯದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ನೇಹಾ, ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರ್ತಿಕ್.ಎಂ.ಸಿ, ಹಾರ್ಮೋನಿಯಂ ವಾದನದಲ್ಲಿ ದೇವನಹಳ್ಳಿ ತಾಲ್ಲೂಕಿನ ಮನೋಜ್ ಕುಮಾರ್, ಆಶುಭಾಷಣ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಆಕಾಶ್.ಜಿ.ಎಂ, ಜನಪದ ಗೀತೆಯಲ್ಲಿ ಮಾತೃಭೂಮಿ ಕನ್ನಡ ಯುವಜನ ಸಂಘ ಹಾಗೂ ಜನಪದ ನೃತ್ಯದಲ್ಲಿ ಮಹಿಳಾ ಸಬಲೀಕರಣ ಕಲಾ ಸಂಸ್ಥೆಯವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.

