ಹೊಳೆಯುವುದೆಲ್ಲ ಚಿನ್ನ ಪುಸ್ತಕ ಕುರಿತು ದೊಡ್ಡಬಳ್ಳಾಪುರದಲ್ಲಿ ವಿಚಾರ ಮಂಥನ / ನಂಬಿಕೆಯ ಮೇಲಷ್ಟೆ ಮನುಷ್ಯನ ಬದುಕು ನಡೆಯುತ್ತಿದೆ: ಕೆ.ವೆಂಕಟೇಶ್

ದೊಡ್ಡಬಳ್ಳಾಪುರ: ವ್ಯಕ್ತಿಗಳನ್ನು ನಂಬುವಾಗ ಮಾತುಗಳ ಮೇಲಷ್ಟೇ ಅವಲಂಬಿತವಾಗದೆ ಅವರ ನಡವಳಿಕೆಗಳ ಮೇಲು ಅವಲಂಬಿತವಾಗಿರುತ್ತದೆ ಎಂದು ಉಪನ್ಯಾಸಕ ಕೆ.ವೆಂಕಟೇಶ್ ಹೇಳಿದರು.

ಅವರು ನಗರದ ಮಹಿಳಾ ಸಮಾಜ ಕಸ್ತೂರಿಬಾ ಶಿಶುವಿಹಾರ ಹಾಗೂ ಮೈಸೂರಿನ ಅರ್ಕ ಫೌಂಡೇಷನ್ ವತಿಯಿಂದ ನಡೆದ ‘ಹೊಳೆಯುವುದೆಲ್ಲ ಚಿನ್ನ’ ಪುಸ್ತಕ ಕುರಿತು ನಡೆದ ವಿಚಾರ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಮನುಷ್ಯನ ಲೆಕ್ಕಾಚಾರಕ್ಕೆ ಸಿಲುಕದೇ ಇರುವುದು ಏನೋ ಇದೆ ಅನ್ನುವುದರ ಹುಡುಕಾಟ ನಡೆಯುತ್ತಲೇ ಇದೆ. ಅಲ್ಲದೆ ಕಾಣದೇ ಇರುವುದರ ಬಗೆಗಿನ ನಂಬಿಕೆ ಮೇಲೆಯೇ ಮನುಷ್ಯನ ಬದುಕು ನಡೆಯುತ್ತಿದೆ. ನಮಗೆ ಸಂಪೂರ್ಣ ಸೋಲು,ಗೆಲುವು ಎನ್ನುವುದಷ್ಟೇ ಇರುವುದಿಲ್ಲ ಎಲ್ಲವೂ ಸಹ ಅಪೂರ್ಣವಾಗಿಯೇ ಇರುತ್ತವೆ. ನಮ್ಮನ್ನು ನಾವು ಚನ್ನಾಗಿ ಅರಿತುಕೊಳ್ಳಲು ಸೂರ್ಯೋದಯ ಮತ್ತು ಸೂರ್ಯಾಸ್ತ ಎರಡನ್ನೂ ನೋಡುವಂತೆ ನಮ್ಮ ಜೀವನ ಕ್ರಮವನ್ನು ಹೊಂದಿಸಿಕೊಳ್ಳಬೇಕು. ಇಂತಹ ಇನ್ನು ಹತ್ತಾರು ವಿಚಾರಗಳನ್ನು ಹೊಳೆಯುವುದೆಲ್ಲ ಚಿನ್ನ ಪುಸ್ತಕದಲ್ಲಿ ಶ್ರೀನಿವಾಸ್ ಅರ್ಕ ಅವರು ಜನ ಸಾಮಾನ್ಯರಿಗು ತಿಳಿಯುವಂತೆ ವಿವರಿಸಿದ್ದಾರೆ ಎಂದರು. 

ನಿವೃತ್ತ ಶಿಕ್ಷಕ ಬಿ.ಎಲ್.ರಾಮಕೃಷ್ಣ ಮಾತನಾಡಿ, ನಮ್ಮ ಪ್ರತಿ ನಿತ್ಯದ ಊಟವು ಸೇರಿದಂತೆ ಎಲ್ಲವೂ ಸಹ ಮಿತವಾಗಿದ್ದಾಗ ಮಾತ್ರ ಬದುಕು ಸುಗಮವಾಗಿರಲು ಸಾದ್ಯ. ಹಾಸ್ಯ ಪ್ರಜ್ಞೆ ಇರುವವರಿಗೆ ಜನ ಸಂಪರ್ಕ ಮತ್ತು ಆರೋಗ್ಯ ಚನ್ನಾಗಿರಲಿದೆ ಎಂದರು.

ಹಿರಿಯ ಕನ್ನಡಪರ ಹೋರಾಟಗಾರ ಟಿ.ಎನ್.ಪ್ರಭುದೇವ್ ಮಾತನಾಡಿ, ಇಂದಿನ ಒತ್ತಡದ ಬದುಕಿನಲ್ಲಿ ಅರೋಗ್ಯ, ಶಿಕ್ಷಣ, ಉತ್ತಮ ಸ್ಥಿತಿಯ ಬದುಕನ್ನು ನಿಭಾಯಿಸುವುದು ಸವಾಲಿನ ಕೆಲಸವಾಗಿದೆ. ನಮ್ಮ ದಿನ ನಿತ್ಯದ ಬದುಕಿನಲ್ಲಿ ಒಂದಿಷ್ಟು ಅಧ್ಯಾತ್ಮದಲ್ಲೂ ಆಸಕ್ತಿ ವಹಿಸಿದರೆ ಹೆಚ್ಚು ದಿನಗಳ ಕಾಲ ಆರೋಗ್ಯವಾಗಿರಲು ಸಹಾಯಕವಾಗಲಿದೆ ಎಂದರು. 

ಸಮಾರಂಭದ ಅಧ್ಯಕ್ಷತೆಯನ್ನು ಮಹಿಳಾ ಸಮಾಜದ ಅಧ್ಯಕ್ಷೆ ಕೆ.ಎಸ್.ಪ್ರಭಾ ವಹಿಸಿದ್ದರು. ಸಮಾರಂಭದಲ್ಲಿ ಅರ್ಕ ಫೌಂಡೇಷನ್ನ ಶ್ರಿನಿವಾಸ್ ಅರ್ಕ, ಪತ್ರಕರ್ತ ಪಿ.ಯು.ಸಂತೋಷ್, ಮಹಿಳಾ ಸಮಾಜದ ಉಪಾಧ್ಯಕ್ಷೆ ಕವಿತಾ, ಕಾರ್ಯದರ್ಶಿ ದೇವಕಿ, ಖಜಾಂಚಿ ಯಶೋಧ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]