ಬೆಂ.ಗ್ರಾ.ಜಿಲ್ಲೆ: ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ಸರ್ವ ಸದಸ್ಯರ ಸಾಮಾನ್ಯ ಸಭೆ”ಯು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ವಿ.ಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ.
ಸಭೆಯಲ್ಲಿ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳು, ಜಿಲ್ಲಾ ಪಂಚಾಯತಿ ಸದಸ್ಯರುಗಳು, ತಾಲ್ಲೂಕು ಪಂಚಾಯತಿ ಅಧ್ಯಕ್ಷರುಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಆರ್.ರವಿಕುಮಾರ್, ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ಬಿ.ವಿನುತಾರಾಣಿ, ಮುಖ್ಯ ಲೆಕ್ಕಾಧಿಕಾರಿ ಟಿ.ರಮೇಶರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

