ಬೆಂ.ಗ್ರಾ.ಜಿಲ್ಲೆ: ಕೊರೋನಾ ವೈರಾಣು ಸೋಂಕು ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್-19 ನಿಯಮಗಳನ್ವಯ “ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಮತ್ತು ರಾಷ್ಟ್ರ್ಟ್ರೀಯ ಯುವ ದಿನಾಚರಣೆ” ಕಾರ್ಯಕ್ರಮವನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರ್ಟ್ರೀಯ ಯುವ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2021ರ ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲು ಸಭೆಯಲ್ಲಿಲ ತೀರ್ಮಾನಿಸಲಾಯಿತು. ಕಳೆದ ವರ್ಷ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲಾಗಿತ್ತು.
ರಾಷ್ಟ್ರ್ಟ್ರೀಯ ಯುವ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ, ಪಿಯುಸಿ, ಮತ್ತು ಪದವಿ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆಗಳನ್ನು ತಾಲ್ಲೂಕು ಮಟ್ಟದಲ್ಲಿ ಆಯೋಜಿಸಿ ವಿಜೇತ ವಿದ್ಯಾರ್ಥಿಗಳನ್ನು ಆಯಾ ತಾಲ್ಲೂಕಿನಲ್ಲಿ ಪ್ರಶಸ್ತಿ ಪತ್ರಗಳನ್ನು ನೀಡುವ ಮೂಲಕ ಗೌರವಿಸಬೇಕು ಹಾಗೂ ವಿಜೇತರನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಿಕೊಳ್ಳಬೇಕು ಎಂದರು.
ತಾಲ್ಲೂಕುವಾರು ಒಬ್ಬ ಶಿಕ್ಷಕರನ್ನು ನೇಮಿಸಿ, ಆ ಶಿಕ್ಷಕರು ಜಿಲ್ಲಾ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮಕ್ಕೆಂದು ಆಗಮಿಸುವ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮೊದಲೇ ಕೋವಿಡ್ ಪರೀಕ್ಷೆ ಮಾಡಿಸಿರಬೇಕು ಎಂದರಲ್ಲದೆ, ಶಿಕ್ಷಕರು ಸಹ ತಮ್ಮ ಕಾಳಜಿ ವಹಿಸುವ ನಿಟ್ಟಿನಲ್ಲಿ ಈ ನಿಮಯಗಳನ್ನು ಪಾಲಿಸಬೇಕು ಎಂದರು.
ಕೋವಿಡ್ ನಿಯಮಗಳನ್ನು ಪಾಲಿಸಬೇಕಾದ್ದರಿಂದ ಕ್ರೀಡಾ ಕಿಟ್ಗಳನ್ನು ವಿತರಿಸುವಾಗ ಸಾಂಕೇತಿಕವಾಗಿ ವೇದಿಕೆ ಮೇಲೆ ಐದರಿಂದ ಹತ್ತು ಜನರಿಗೆ ಮಾತ್ರ ನೀಡಿ, ಕಾರ್ಯಕ್ರಮದ ನಂತರ ಉಳಿದವರಿಗೆ ತಲುಪಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದರಲ್ಲದೆ, ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ತಪಾಸಣೆ ನಡೆಸಲು ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗೆ ತಿಳಿಸಿದರು.
ಶಾಲಾ ಕಾಲೇಜುಗಳು, ಪದವಿ ಹಂತದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟಕೊಂಡು ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸೇವೆ ಸಲ್ಲಿಸಿರುವ ಎನ್.ಎಸ್.ಎಸ್. ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ಸ್ಕೌಟ್ಸ್ ಅಂಡ್ ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತ ನಾಗರಾಜು, ಜಿಲ್ಲೆಯ ಸರ್ಕಾರಿ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು, ಎನ್.ಎಸ್.ಎಸ್ ಸಿಬ್ಬಂದಿ, ಸ್ಕೌಟ್ಸ್ ಅಂಡ್ ಗೈಡ್ಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

