ಅರ್ಹ ವಿಕಲಚೇತನರಿಗೆ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ತಲುಪಿಸುವುದು ಸರ್ಕಾರದ ಆದ್ಯ ಕರ್ತವ್ಯ: ಆರ್.ಅಶೋಕ್

ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಸಬಲೀಕರಣಕ್ಕಾಗಿ ಜಾರಿಗೊಳಿಸಲಾದ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ತಲುಪಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು‌ ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್‌  ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಚೇತನರ ಸಬಲೀಕರಣ ಇಲಾಖೆ, ಭಾರತ ಸರ್ಕಾರ, ಕೃತಕ ಅಂಗಾಂಗ ತಯಾರಿಕಾ ಕಾರ್ಪೋರೇಷನ್ ಆಫ್ ಇಂಡಿಯಾ(ಆಲಿಂಕೋ), ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ “ಸಾಮಾಜಿಕ ಅಧಿಕಾರಿತಾ ಶಿಬಿರ, ಕೇಂದ್ರ ಸರ್ಕಾರದ ವಿಶೇಷ ಅಡಿಪ್(ADIP)  ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆಯ(ದಿವ್ಯಂಗಜನ) ಉದ್ಘಾಟನೆ ಹಾಗೂ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳ ವಿತರಣಾ ಸಮಾರಂಭ”ವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ವಿಕಲಚೇತನರು, ಹಿರಿಯ ನಾಗರಿಕರು ಹಾಗೂ ವಿಧವೆಯರಿಗಾಗಿ ವಾರ್ಷಿಕವಾಗಿ 7500 ಕೋಟಿ ಪಿಂಚಣಿಯನ್ನು ಸರ್ಕಾರ ನೀಡುತ್ತಿದ್ದು, ಅವರು ಗೌರವದಿಂದ ಬದುಕಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪಿಂಚಣಿ ಯೋಜನೆಯನ್ನು ಕೆಲವು ಮಧ್ಯವರ್ತಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರಿಂದಾಗಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪುತ್ತಿಲ್ಲವಾದ ಕಾರಣ  ಇಂತಹ ಘಟನೆಗಳು ಮರುಕಳಿಸದಂತೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಯೋಜನೆ ಶೀಘ್ರವೇ ಅಂದರೆ 15 ದಿನಗಳಲ್ಲಿ ಜಾರಿಗೆ ಬರಲಿದ್ದು, ಅಕ್ರಮಗಳಿಗೆ ಕಡಿವಾಣ ಬೀಳಲಿದೆ ಎಂದರು.ರಾಜ್ಯದಲ್ಲಿ 8,59,761 ಅಂಗವಿಕಲ ಪಿಂಚಣಿದಾರರಿದ್ದು, ಶೇ. 75% ರಷ್ಟು ಅಂಗವೈಕಲ್ಯ ಇರುವ 3,79,116 ವಿಕಲಚೇತನರಿಗೆ ಪ್ರತಿ‌ ತಿಂಗಳು ರೂ. 600 ಪಿಂಚಣಿ  ಮತ್ತು ಶೇ. 75% ಕ್ಕಿಂತ ಹೆಚ್ಚು ಅಂಗವೈಕಲ್ಯ ಹೊಂದಿರುವವ 4,86,645 ವಿಕಲಚೇತನರಿಗೆ ಪ್ರತಿ ತಿಂಗಳು ರೂ.1400 ಪಿಂಚಣಿ ಕೊಡಲಾಗುತ್ತಿದೆ. ಎಂದರಲ್ಲದೆ, ವಿಕಲಚೇತನರಿಗೆ ವಿಶೇಷ ಸಾಧನೆ ಮಾಡುವ ಶಕ್ತಿಯಿದ್ದು, ಸಾಧನೆಯತ್ತ ಗಮನ ಹರಿಸುವಂತೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಶಶಿಕಲಾ ಅಣ್ಣಾ ಸಾಹೇಬ ಜೊಲ್ಲೆ ಅವರು ಮಾತನಾಡಿ ಜನಪ್ರತಿನಿಧಿಗಳು, ಅಧಿಕಾರಿಗಳು ವಿಕಲಚೇತನರಿಗೆ ನೆರವಾಗುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು ಎಂದರಲ್ಲದೆ, ಕೇಂದ್ರ ಸರ್ಕಾರ ಹಾಗೂ ಅಲಿಂಕೋ ಸಂಸ್ಥೆ ‌ಸಹಯೋಗದೊಂದಿಗೆ ರೂ.48.32ಲಕ್ಷ ಮೌಲ್ಯದ ಗಾಲಿ‌ ಕುರ್ಚಿ, ದ್ವಿ ಚಕ್ರ ವಾಹನಗಳು ಸೇರಿದಂತೆ ವಿವಿಧ ರೀತಿಯ ‌ವಿಕಲಚೇತನರ ಸಾಧನ ಸಲಕರಣೆಗಳು, ಪರಿಕರಗಳನ್ನು ನೀಡುತ್ತಿರುವುದು ಶ್ಲಾಘನೀಯ ‌ಎಂದರು.

ವಿ.ಆರ್. ಡಬ್ಲ್ಯೂ ಗಳಿಗೆ ಮಾಸಿಕ ಗೌರವಧನ ರೂ.3000ದಿಂದ ರೂ.6000ಕ್ಕೆ ಹಾಗೂ ಎಂ.ಆರ್.ಡಬ್ಲೂ ಮಾಸಿಕ ಗೌರವಧನ ರೂ.6000ದಿಂದ ರೂ.12000ಕ್ಕೆ ಹೆಚ್ಚು ಮಾಡಲಾಗಿದೆ.

ದಿವ್ಯಾಂಗರಿಗೆ ಬೇಕಿರುವುದು ಅನುಕಂಪವಲ್ಲ, ಸಬಲೀಕರಣಗೊಳ್ಳಲು ಅಗತ್ಯವಾದ ಅವಕಾಶಗಳು ಎಂದರಲ್ಲದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಿದ್ದು ಸ್ವಯಂ ‌ಉದ್ಯೋಗ‌ ರೂಪಿಸಿಕೊಳ್ಳಲು ವಿಕಲಚೇತನರಿಗೆ ಸಹಾಯಧನದಡಿ ‌ಸಾಲ‌ ಸೌಲಭ್ಯ ನೀಡಲಾಗುತ್ತಿದ್ದು, ಯೋಜನೆಗಳ ಸೌಲಭ್ಯ ಪಡೆಯುವಂತೆ ತಿಳಿಸಿದರು ಹಾಗೂ ವಿಕಲಚೇತನರು ಒಬ್ಬಂಟಿ‌ ಎಂಬ ಭಾವನೆ ಮರೆತು ಸರ್ಕಾರ ಅವರೊಂದಿಗೆ ಸದಾ ಇದೆ ಎಂದು‌ ಹೇಳಿದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಕಲಚೇತನರು ಎಂಬ ಮನೋಭಾವದಿಂದ ಹೊರಬಂದು ಕೆಲಸ ಮಾಡಬೇಕು ಎಂದರಲ್ಲದೆ, ಖಾಸಗಿ‌ ಸಂಸ್ಥೆ ಮತ್ತು ಕೈಗಾರಿಕಾ ವಲಯಗಳಲ್ಲಿ ವಿಕಲಚೇತನರಿಗೆ ರಾಜ್ಯ ಸರ್ಕಾರ ಮೀಸಲಾತಿ ಕಲ್ಪಿಸುವ ಮೂಲಕ ಗೌರವಯುತ ಜೀವನ ಕಟ್ಟಿಕೊಳ್ಳಲು ನೆರವಾಗಬೇಕಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವರುಗಳು ವಿಕಲಚೇತನರಿಗೆ ದ್ವಿ ಚಕ್ರವಾಹನ, ಗಾಲಿ ಕುರ್ಚಿ, ಶ್ರವಣ ಸಾಧನ ಯಂತ್ರ, ಕೃತಕ ಕೈ, ಕಾಲುಗಳು, ಊರುಗೋಲುಗಳು ಸೇರಿದಂತೆ ವಿಕಲಚೇತನರ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ.ಜಿ.ರಾಯರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಸೇರಿದಂತೆ ಆಲಿಂಕೋ ಸಂಸ್ಥೆ ಪ್ರತಿನಿಧಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ದಿವ್ಯಾಂಗರು ಮತ್ತಿತ್ತರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!