ಹಾಡೋನಹಳ್ಳಿ ಕೆವಿಕೆಯಲ್ಲಿ ತೆಂಗು ಬೆಳೆಯ ಸುಧಾರಿತ ಬೇಸಾಯ ಪದ್ಧತಿಗಳು ಮತ್ತು ಯಾಂತ್ರೀಕರಣ – ತರಬೇತಿ ಕಾರ್ಯಕ್ರಮ

ಬೆಂ.ಗ್ರಾ.ಜಿಲ್ಲೆ: ನವೀನ ಉದ್ಯಮಗಳ ಮೂಲಕ ಗ್ರಾಮೀಣ ಯುವಜನತೆಗೆ ಉದ್ಯೋಗ ಹಾಗೂ ಜೀವನೋಪಾಯ ಭದ್ರತೆ (ARYA)” ಯೋಜನೆಯಡಿ ತೆಂಗು ಬೆಳೆಯ ಸುಧಾರಿತ ಬೇಸಾಯ ಪದ್ಧತಿಗಳು ಮತ್ತು ಯಾಂತ್ರೀಕರಣ ಕುರಿತು ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗ್ರಾಮೀಣ ಯುವಕರಿಗೆ ಡಿ.28  ರಿಂದ ಜ.2 ರ ವರೆಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಎ.ಪಿ.ಮಲ್ಲಿಕಾರ್ಜುನಗೌಡ  ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಗ್ರಾಮೀಣ ಯುವಕರು ಈ ತರಬೇತಿಯ ನಂತರ ತೆಂಗಿನ ಮರ ಹತ್ತುವುದನ್ನು ಒಂದು ಉದ್ಯೋಗವನ್ನಾಗಿ ಮಾಡಿಕೊಂಡರೆ ಗ್ರಾಮೀಣ ಪ್ರದೇಶಗಳಲ್ಲಿ ಜೀವನೋಪಾಯ ರೂಪಿಸಿಕೊಳ್ಳಬಹುದು ಮತ್ತು ಇದರಿಂದ ಕೆಲಸಕ್ಕಾಗಿ ನಗರ ಪ್ರದೇಶಗಳನ್ನು ಅವಲಂಬಿಸುವುದನ್ನು ತಡೆಯಬಹುದು ಎಂದು ಅಭಿಪ್ರಾಯಪಟ್ಟರು.

ಜಿಕೆವಿಕೆ ನಿವೃತ್ತ ಪ್ರಾಧ್ಯಾಪಕ ಡಾ. ಎಂ.ಚಂದ್ರೇಗೌಡ, ತೆಂಗಿನಲ್ಲಿ ಸುಧಾರಿತ ತಳಿಗಳು, ಆಯ್ಕೆ ಮತ್ತು ತೆಂಗಿನ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು.

ತರಬೇತಿ ಸಂಯೋಜಕ ಬೇಸಾಯ ಶಾಸ್ತ್ರದ ವಿಜ್ಞಾನಿ ಡಾ.ಜೆ.ವೆಂಕಟೇ ಗೌಡ, ಇವರು ತೆಂಗಿನ ಬೆಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳು ಬಗ್ಗೆ ಮಾಹಿತಿ ನೀಡಿದರು. 

ಸಸ್ಯ ಸಂರಕ್ಷಣೆ ವಿಜ್ಞಾನಿ ಡಾ. ಬಿ ಮಂಜುನಾಥ್, ತೆಂಗಿಗೆ ಬರುವ ಪ್ರಮುಖ ರೋಗ ಹಾಗೂ ಕೀಟಗಳ ಬಗ್ಗೆ ತಿಳಿಸಿ, ಅವುಗಳ ನಿವಾರಣೆ ತಂತ್ರಗಳ ಬಗ್ಗೆ ರೈತರಿಗೆ ಅರಿವು ಮೂಡಿಸಿದರು.

ಮಣ್ಣು ವಿಜ್ಞಾನ ವಿಜ್ಞಾನಿ ಡಾ.ಪಿ ವೀರನಾಗಪ್ಪ ಇವರು ಮಣ್ಣು ಪರೀಕ್ಷೆ ಮಹತ್ವ ಮತ್ತು ತೆಂಗಿನ ಸಮಗ್ರ ಪೋಷಕಾಂಶಗಳ ಬಗ್ಗೆ ಮಾಹಿತಿ ನೀಡಿದರು. 

RAYA ಯೋಜನೆಯ ಹಿರಿಯ ಸಂಶೋಧನಾ ಸಹಾಯಕ ಎಸ್.ಶಿವಪ್ರಸಾದ್,  ತೆಂಗಿನ ಬೇಸಾಯದಲ್ಲಿ ಉಪಯೋಗಿಸುವ ವಿವಿಧ ಯಂತ್ರಗಳ ಬಗ್ಗೆ ತಿಳಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಅನಿಲ್ ಕುಮಾರ್ ರವರು ಶಿಬಿರಾರ್ಥಿಗಳಿಗೆ ಸಾಧನವನ್ನು ಬಳಸಿ ತೆಂಗಿನ ಮರ ಹತ್ತುವ ಕೌಶಲ್ಯವನ್ನು ಹೇಳಿಕೊಟ್ಟರು, ಇದರಿಂದ ಪ್ರತಿಯೊಬ್ಬರೂ ತೆಂಗಿನ ಮರ ಹತ್ತಿ ಮರವನ್ನು ಶುಚಿ ಗೊಳಿಸುವುದು ಹಾಗೂ ಕಾಯಿ ಕೀಳುವ ಕಲೆಯನ್ನು ಕಲಿತರು.

ಈ ವೇಳೆ ಶಿಬಿರಾರ್ಥಿಗಳಿಗೆ ತೆಂಗಿನ ಮರ ಹತ್ತುವ ಸಾಧನ, ಹೆಲ್ಮೆಟ್, ಕುಡುಗೋಲು ಮತ್ತು ಪ್ರಥಮ ಚಿಕಿತ್ಸೆ ಕಿಟ್‍ಗಳನ್ನು ಉಚಿತವಾಗಿ ನೀಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 40 ಜನ ಯುವಕರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಗ್ಯಾರಂಟಿ ಯೋಜನೆ ಟೀಕಿಸಿದ್ದ ಬಿಜೆಪಿ ಈಗ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ:

ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="111370"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ದೊಡ್ಡಬಳ್ಳಾಪುರ: ಮಲಗಿದ್ದ ವೇಳೆ ಮನೆಯಲ್ಲಿ ಬೆಂಕಿ.. ವ್ಯಕ್ತಿ ಸಾವು.!

ಆಕಸ್ಮಿಕವಾಗಿ ತಗುಲಿದ ಬೆಂಕಿಯ (Fire) ಕೆನ್ನಾಲಿಗೆಗೆ ಮನೆಯಲ್ಲಿ ಮಲಗಿದ್ದ ವೇಳೆ ವ್ಯಕ್ತಿಯೋರ್ವ ಸುಟ್ಟು ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ

[ccc_my_favorite_select_button post_id="111353"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!