ಬೆಂಗಳೂರು: ಪ್ರತಿಷ್ಠಿತ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕವನ್ನು ರಾಜ್ಯಪಾಲರಾದ ವಾಜೂಭಾಯಿ ರುಡಾ ಭಾಯಿ ವಾಲಾ ದೊಡ್ಡಬಳ್ಳಾಪುರ ಉಪ ವಿಭಾಗದ ಡಿವೈಎಸ್ಪಿ ಟಿ.ರಂಗಪ್ಪರಿಗೆ ಪ್ರಧಾನ ಮಾಡಿದರು.
ಇಂದು ರಾಜಭವನದಲ್ಲಿ ಗಾಜಿನ ಮನೆಯಲ್ಲಿ ಪೊಲೀಸ್ ಇಲಾಖೆ ಆಯೋಜಿಸಿದ್ದ ಪೊಲೀಸ್ ಪದಕ ಪ್ರಧಾನ ಸಮಾರಂಭದಲ್ಲಿ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವ ದಿನಾಚರಣೆಯ (2018-19ನೇ ಸಾಲಿನ) ಸಂಧರ್ಭದಲ್ಲಿ ವಿಶೇಷ ಸೇವೆ ಪರಿಗಣಿಸಿ ರಂಗಪ್ಪರಿಗೆ ರಾಜ್ಯಪಾಲರು ಪ್ರಶಸ್ತಿ ನೀಡಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಡಿಜಿಪಿ ಪ್ರವೀಣ್ ಸೂದ್ ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

